Tuesday, December 16, 2025
16.7 C
Bengaluru
Google search engine
LIVE
ಮನೆರಾಜ್ಯಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ- ಡಿ.ಕೆ ಶಿವಕುಮಾರ್​

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ- ಡಿ.ಕೆ ಶಿವಕುಮಾರ್​

ಬೆಂಗಳೂರು: ಕರ್ನಾಟಕದಲ್ಲಿ ಅಧಿಕಾರ ಹಂಚಿಕೆ ವಿಚಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಡಿಸಿಎಂ ಡಿ.ಕೆ ಶಿವಕುಮಾರ್​​ ಹಾಗೂ ಸಿದ್ದರಾಮಯ್ಯ ಕುರ್ಚಿ ವಿಚಾರ ಹೈ ಕಮಾಂಡ್​ಗೆ ಡೊದ್ದ ತಲೆಬಿಸಿಯಾಗಿದೆ.. ಇದರ ನಡುವೆ ಡಿಸಿಎಂ ಡಿ.ಕೆ ಶಿವಕುಮಾರ್​​ ಅವರ ತಮ್ಮ ಎಕ್ಸ್​​ ಖಾತೆಯಲ್ಲಿ ಮಾರ್ಮಿಕವಾಗಿ ಸಂದೇಶವನ್ನು ಹಂಚಿಕೊಂಡಿದ್ದಾರೆ..

ಪವರ್​ ಶೇರಿಂಗ್ ವಿಚಾರದ ಬಗ್ಗೆ ಹೈಕಮಾಂಡ್​ನಲ್ಲಿ ಭಾರೀ ಚರ್ಚೆ ಆಗ್ತಿರುವಾಗಲೇ ಇಂದು ಬೆಳ್ಳಂ ಬೆಳಗ್ಗೆಯೇ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ಡಿಕೆ ಟ್ವೀಟ್​ ಇದೀಗ ಕುತೂಹಲ ಮೂಡಿಸಿದ್ದು, ಪೋಸ್ಟ್ ಹಿಂದಿನ ಒಳ ಮರ್ಮವೇನು ಎನ್ನುವ ಚರ್ಚೆ ಹುಟ್ಟುಹಾಕಿದೆ.

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಟ್ವೀಟ್ ಮಾಡಿದ್ದಾರೆ. ಯಾರಿಗೆ ಕೊಟ್ಟ ಮಾತು ನೆನಪಿಸುತ್ತಿದ್ದಾರೆ ಡಿಸಿಎಂ ಎನ್ನುವ ಪ್ರಶ್ನೆ ಮೂಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದ್ದು, ಡಿಕೆಶಿ ಕೂಡ ಭಾಗಿಯಾಗಲಿದ್ದಾರೆ. ಈ ಹೊತ್ತಲ್ಲೇ ಡಿಕೆಶಿ ಕೊಟ್ಟ ಮಾತಿನ ಕುರಿತು ಪೋಸ್ಟ್ ಮಾಡಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ವಿಶ್ವದ ಅತಿದೊಡ್ಡ ಶಕ್ತಿ ಎಂದರೆ ಮಾತನ್ನು ಉಳಿಸಿಕೊಳ್ಳುವುದು. ನ್ಯಾಯಾಧೀಶರಾಗಲಿ, ಅಧ್ಯಕ್ಷರಾಗಲಿ ಅಥವಾ ನಾನು ಸೇರಿದಂತೆ ಬೇರೆ ಯಾರೇ ಆಗಿರಲಿ, ಎಲ್ಲರೂ ಹೇಳಿದಂತೆ ನಡೆಯಬೇಕು. ಕೊಟ್ಟ ಮಾತೇ ವಿಶ್ವ ಶಕ್ತಿ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಟ್ವೀಟ್​ ಮಾಡಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments