Top Newsರಾಜಕೀಯಸುದ್ದಿ

ನಮಗೆ ಉಪ್ಪಿಟ್ಟು ಬೇಡ, ಬಿರಿಯಾನಿ, ಚಿಕನ್ ಫ್ರೈ ಕೊಡಿ! ಅಂಗನವಾಡಿ ಬಾಲಕನ ಮನವಿಗೆ ಸಚಿವೆ ಒಪ್ಪಿಗೆ

ತಿರುವನಂತಪುರಂ: ಅಂಗನವಾಡಿಯಲ್ಲಿ ಉಪ್ಪಿಟ್ಟು ಬದಲಿಗೆ ಬಿರಿಯಾನಿ ಮತ್ತು ಚಿಕನ್‌ ಫ್ರೈ ನೀಡುವಂತೆ ಬಾಲಕ ಮಾಡಿದ ಮನವಿಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಒಪ್ಪಿಗೆ ಸೂಚಿಸಿದ್ದಾರೆ.

ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ವೀಣಾ ಜಾರ್ಜ್ ಸೋಮವಾರ ಶಂಕು ಎಂಬ ಮಗು ಇಂತಹ ವಿನಮತಿಯನ್ನು ಮಾಡುತ್ತಿರುವ ವೀಡಿಯೋವನ್ನು ತಮ್ಮ ಫೇಸ್​ಬುಕ್ ಪುಟದಲ್ಲಿ ಹಂಚಿಕೊಂಡಿದ್ದು, ಅಂಗನವಾಡಿಯ ಮೆನುವನ್ನು ಪರಿಷ್ಕರಿಸಲಾಗುವುದು ಎಂದು ಹೇಳಿದ್ದಾರೆ. ಅಲ್ಲದೇ ಮಗು ಮುಗ್ದವಾಗಿ ವಿನಂತಿಯನ್ನು ಮಾಡಿದೆ ಮತ್ತು ಅದನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಊಟದ ಮೆನುವಿನಲ್ಲಿ ಉಪ್ಪಿಟ್ಟು ಬದಲಿಗೆ ಬಿರಿಯಾನಿ, ಚಿಕನ್‌ ಫ್ರೈ ನೀಡಬೇಕು ಎಂದು ಪುಟ್ಟ ಬಾಲಕ ಮನವಿ ಮಾಡಿರುವ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ವೀಡಿಯೋಗೆ ಸಚಿವರು ಸ್ಪಂದಿಸಿದ್ದಾರೆ. ಅಂಗನವಾಡಿಗಳಲ್ಲಿನ ಆಹಾರ ಮೆನುವನ್ನು ಪರಿಶೀಲಿಸಲು ಮತ್ತು ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಎರಡು ದಿನಗಳ ಹಿಂದೆ ಶಂಕು ಅಂಗನವಾಡಿಯಲ್ಲಿ ಬಿರ್ನಾನಿ ಮತ್ತು ಫ್ರೈ ಚಿಕನ್ ಬೇಡಿಕೆ ಇಟ್ಟಿದ್ದ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ವಿಡಿಯೋದಲ್ಲಿ ಶಂಕು, ಅಂಗನವಾಡಿಯಲ್ಲಿರುವ ಉಪ್ಪಿಟ್ಟನ್ನು ಬಿರಿಯಾನಿ ಮತ್ತು ಫ್ರೈ ಚಿಕನ್ ನೊಂದಿಗೆ ಬದಲಾಯಿಸಬೇಕೆಂದು ಹೇಳುತ್ತಾನೆ. ವಿಡಿಯೋ ವೈರಲ್ ಆದ ನಂತರ, ಅನೇಕ ಜನರು ವೇದಿಕೆಗೆ ಬಂದು ಕಾಮೆಂಟ್ ಮಾಡಿ ವಿನಂತಿಯನ್ನು ಪರಿಗಣಿಸುವಂತೆ ಕೇಳಿದರು. ಇದರ ಬೆನ್ನಲ್ಲೇ, ಅಂಗನವಾಡಿ ಕೇಂದ್ರಗಳಲ್ಲಿ ಆಹಾರ ಮೆನುವನ್ನು ಪರಿಷ್ಕರಿಸಲಾಗುವುದು ಎಂದು ಸಚಿವೆ ವೀಣಾ ಜಾರ್ಜ್ ಘೋಷಿಸಿದರು.

https://www.facebook.com/100044433669726/videos/1327716005097521/?__so__=watchlist&__rv__=video_home_www_playlist_video_list

ಕೇರಳದಲ್ಲಿ ಅಂಗನವಾಡಿಗಳ ಮೂಲಕ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಒದಗಿಸಲು ಸರ್ಕಾರ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಮಕ್ಕಳ ಪೋಷಣೆಗೆ ಪೂರಕವಾಗಿ ಊಟ ನೀಡಲಾಗುತ್ತಿದೆ. ಮೊಟ್ಟೆ ಮತ್ತು ಹಾಲನ್ನು ಸಹ ಸರ್ಕಾರ ನೀಡುತ್ತಿದೆ. ಮಕ್ಕಳು ಪೌಷ್ಟಿಕ ಆಹಾರದಿಂದ ಆರೋಗ್ಯದ ಪ್ರಯೋಜನ ಪಡೆಯಲು ಸಹಕಾರಿಯಾಗಿದೆ.

Comments (0)

Your email address will not be published. Required fields are marked *

Back to top button