#Exclusive NewsTop Newsಜಿಲ್ಲೆಸುದ್ದಿ
ED ಹೆಸರಲ್ಲಿ ಉದ್ಯಮಿ ಮನೆ ದರೋಡೆ ಮಾಡಿದ ಖದೀಮರು…..!

ಮಂಗಳೂರು : ಜಾರಿ ನಿರ್ದೇಶನಾಲಯದ ಹೆಸರಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ ಮಾಡಿದ ಖದೀಮರು 30 ಲಕ್ಷ ರೂ. ಕದ್ದು ಪರಾರಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಘಟನೆ ನಡೆದಿದೆ.
ಸುಲೈಮಾನ್ ಹಾಜಿ ಎಂಬುವರು ಸಿಂಗಾರಿ ಬೀಡಿ ಎಂಬ ಹೆಸರಿನ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ತಮಿಳುನಾಡು ಮೂಲದ ಖದೀಮರ ತಂಡ ಸುಲೈಮಾನ್ ಹಾಜಿ ಅವರ ಮನೆಗೆ ಕಾರ್ನಲ್ಲಿ ಆಗಮಿಸಿದೆ. ನಾವು ಇಡಿ ಅಧಿಕಾರಿಗಳು ಎಂದು ಸುಲೈಮಾನ್ ಹಾಜಿ ಅವರನ್ನು ನಂಬಿಸಿ ಸುಮಾರು ಎರಡು ಗಂಟೆಗಳವರೆಗೆ ಮನೆಯಲ್ಲ ಪರಿಶೀಲಿಸಿದ್ದಾರೆ. ಕೊನೆಗೆ ಮನೆಯಲ್ಲಿದ್ದ ಸುಮಾರು 30 ಲಕ್ಷ ರೂ. ದೋಚಿ ಪರಾರಿಯಾಗಿದ್ದಾರೆ.
ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಟ್ಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿದೆ.




