Thursday, September 11, 2025
20.3 C
Bengaluru
Google search engine
LIVE
ಮನೆಕ್ರಿಕೆಟ್ಸೆಂಚುರಿ ಮೇಲೆ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಸೆಂಚುರಿ ಮೇಲೆ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

KL Rahul : ಕೆಎಲ್ ರಾಹುಲ್ ಅವರ ಶತಕದ ನೆರವಿನಿಂದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 245 ರನ್ ಕಲೆಹಾಕಿ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿರುವ ಸೌತ್ ಆಫ್ರಿಕಾ ತಂಡವು 5 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 14 ರನ್ ಕಲೆಹಾಕಿದೆ.

ಸೆಂಚುರಿಯನ್​ನ ಸೂಪರ್​ಸ್ಪೋರ್ಟ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಆಕರ್ಷಕ ಶತಕ ಬಾರಿಸಿದ್ದಾರೆ. ಈ ಶತಕದೊಂದಿಗೆ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಟೀಮ್ ಇಂಡಿಯಾವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡವು 107 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಈ ಹಂತದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೆಎಲ್ ರಾಹುಲ್ ಅತ್ಯುತ್ತಮ ಇನಿಂಗ್ಸ್ ಆಡಿದರು. ಕೆಳ ಕ್ರಮಾಂಕದ ಬ್ಯಾಟರ್​ಗಳ ಜೊತೆಗೂಡಿ ಇನಿಂಗ್ಸ್ ಕಟ್ಟಿದ ರಾಹುಲ್ ಮೊದಲ ದಿನದಾಟದ ಮುಕ್ತಾಯದ ವೇಳೆ 70 ರನ್​ಗಳಿಸಿ ಅಜೇಯರಾಗಿ ಉಳಿದರು.

2ನೇ ದಿನದಾಟದಲ್ಲೂ ಬಿರುಸಿನ ಬ್ಯಾಟಿಂಗ್​ ಪ್ರದರ್ಶಿಸಿದ ಕೆಎಲ್ ರಾಹುಲ್ 133 ಎಸೆತಗಳಲ್ಲಿ 14ಫೋರ್ ಹಾಗೂ 4 ಭರ್ಜರಿ ಸಿಕ್ಸ್​ಗಳೊಂದಿಗೆ ಶತಕ ಪೂರೈಸಿದರು. ಈ ಮೂಲಕ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಮೊತ್ತವನ್ನು 245 ರನ್​ಗಳಿಗೆ ತಂದು ನಿಲ್ಲಿಸಿದರು.

ಈ ಭರ್ಜರಿ ಶತಕದೊಂದಿಗೆ ಸೆಂಚುರಿಯನ್ ಮೈದಾನದಲ್ಲಿ 2 ಸೆಂಚುರಿ ಸಿಡಿಸಿದ ಮೊದಲ ವಿದೇಶಿ ಬ್ಯಾಟರ್ ಎಂಬ ದಾಖಲೆ ಕೆಎಲ್ ರಾಹುಲ್ ಪಾಲಾಗಿದೆ. ಇದಕ್ಕೂ ಮುನ್ನ 2021ರಲ್ಲಿ ರಾಹುಲ್ ಇದೇ ಮೈದಾನದಲ್ಲಿ ಶತಕ ಬಾರಿಸಿದ್ದರು.

ಇನ್ನು ಕೆಎಲ್ ರಾಹುಲ್ 101 ಅವರ ಶತಕದ ನೆರವಿನಿಂದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 245 ರನ್ ಕಲೆಹಾಕಿ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿರುವ ಸೌತ್ ಆಫ್ರಿಕಾ ತಂಡವು 5 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 14 ರನ್ ಕಲೆಹಾಕಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments