Top Newsರಾಜ್ಯಸುದ್ದಿ

ನಂದಿನಿ ಹಾಲಿನ ದರ ಏರಿಕೆ ಸಾಧ್ಯತೆ: 5 ರೂ. ಹೆಚ್ಚಿಸುವಂತೆ ರೈತರಿಂದ ಮನವಿ

ಬೆಂಗಳೂರು: ದರ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಕರ್ನಾಟಕ ಸರ್ಕಾರ  ಮತ್ತೊಂದು ಶಾಕ್ ನೀಡುವ ಸಾಧ್ಯತೆ ಇದೆ. ಹೌದು, ಕರ್ನಾಟಕ ಹಾಲು ಒಕ್ಕೂಟ  KMF ನಂದಿನಿ ಹಾಲಿನ  ದರ ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ. ಈ ಹಿಂದೆ ಪ್ರತಿ ಲೀಟರ್​ನಲ್ಲಿ​ ಹೆಚ್ಚುವರಿಯಾಗಿ 50 ಎಂಎಲ್​​ ನೀಡಿ 2 ರೂಪಾಯಿ ಏರಿಕೆ ಮಾಡಿತ್ತು. ಇದೀಗ, ಮತ್ತೆ ಕೆಎಂಎಫ್​ ಹಾಲಿನ ದರ ಏರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

“ಆದರೆ, ಕೆಲ ದಿನಗಳ ಹಿಂದೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ್ದ ಕೆಎಂಎಫ್​ ಅಧ್ಯಕ್ಷ ಭೀಮಾ ನಾಯ್ಕ್​ ಹಾಲಿನ ದರ ಏರಿಕೆಯ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೇಳಿದ್ದರು”. ಆದರೆ, ಇದೀಗ ಭೀಮಾ ನಾಯ್ಕ್ ಅವರ ಈ ಹೇಳಿಕೆ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಈ ಹಿಂದೆ ಎಷ್ಟು ಏರಿಕೆ?

ಕೆಎಂಎಫ್​​ ಈ ಹಿಂದೆ ಪ್ರತಿ ಲೀಟರ್​ನಲ್ಲಿ​ ಹೆಚ್ಚುವರಿಯಾಗಿ 50 ಎಂಎಲ್​​ ನೀಡಿ 2 ರೂಪಾಯಿ ಏರಿಕೆ ಮಾಡಿತ್ತು. ಇದರಿಂದ ಅರ್ಧ ಲೀಟರ್ ಹಾಲಿನ ಪ್ಯಾಕೆಟ್​ ದರ 22ರಿಂದ 24 ರೂ.ಗೆ ಏರಿಕೆಯಾಗಿತ್ತು. ಒಂದು ಲೀಟರ್​ ಹಾಲಿನ ದರ ಏರಿಕೆ 42 ರಿಂದ 44 ರೂ.ಗೆ ಏರಿಕೆಯಾಗಿತ್ತು. ಮೊಸರು, ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಿರಲಿಲ್ಲ.

ಖರೀದಿ ದರ ಇಳಿಕೆ ಮಾಡಿದ್ದ ಕಾಂಗ್ರೆಸ್ ಸರ್ಕಾರ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ಬಾರಿ ಹಾಲಿನ ದರ ಏರಿಕೆ ಮಾಡಿ, ಎರಡು ಬಾರಿ ರೈತರಿಂದ ಹಾಲಿನ ಖರೀದಿ ದರವನ್ನು ಇಳಿಕೆ ಮಾಡಿತ್ತು. ಹಾಲಿನ ಖರೀದಿ ದರ ಇಳಿಕೆ ಮಾಡುವ ಮೊದಲು ರೈತರಿಗೆ ಲೀಟರ್​ ಹಾಲಿಗೆ 34 ರೂಪಾಯಿ ಸಿಗುತ್ತಿತ್ತು. ಆದರೆ ಹಾಲು ಖರೀದಿ ದರ ಎರಡು ಬಾರಿ ಇಳಿಕೆ ಮಾಡಿದ ನಂತರ ಈಗ ಲೀಟರ್ ಹಾಲಿಗೆ ರೈತರಿಗೆ ಸಿಗುತ್ತಿರುವುದು ಕೇವಲ 30 ರೂಪಾಯಿ 15 ಪೈಸೆ ಮಾತ್ರ.

Comments (0)

Your email address will not be published. Required fields are marked *

Back to top button