Tuesday, January 27, 2026
24 C
Bengaluru
Google search engine
LIVE
ಮನೆ#Exclusive NewsTop Newsದಿಢೀರ್ ಅನಾರೋಗ್ಯ: ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು – ಇಂದಿನ ಎಲ್ಲ ಕಾರ್ಯಕ್ರಮಗಳು ರದ್ದು

ದಿಢೀರ್ ಅನಾರೋಗ್ಯ: ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು – ಇಂದಿನ ಎಲ್ಲ ಕಾರ್ಯಕ್ರಮಗಳು ರದ್ದು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಮಂಡಿ ನೋವು ಕಾಣಿಸಿಕೊಂಡಿದೆ. ವೈದ್ಯರ ಸಲಹೆ ಮೇರೆಗೆ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

ಸಿಎಂ ಸಿದ್ದರಾಮಯ್ಯಗೆ ಎಡಗಾಲಿನ ಮಂಡಿ ನೋವು ಹೆಚ್ಚಾಗಿದೆ. ಹೀಗಾಗಿ ಸದ್ಯ ಅವರು ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಪತ್ರೆಯಲ್ಲಿ ಡಾ. ಸತ್ಯನಾರಾಯಣ ಅವರು ಸಿಎಂ ಸಿದ್ದರಾಮಯ್ಯರನ್ನು ತಪಾಸಣೆ ನಡೆಸಿದ್ದಾರೆ. ಈ ಸಿದ್ದರಾಮಯ್ಯ ಹಿಂದೆ ಲೆಗಮೆಂಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅದೇ ಜಾಗದಲ್ಲಿ ಮತ್ತೆ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. 2 ದಿನ ಪ್ರಯಾಣ ಮಾಡದೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹೊಸೂರು ಗ್ರಾಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬರುತ್ತಾರೆ ಎಂದು ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. 500 ಜನ ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳಿಂದ ಬಂದೋಬಸ್ತ್ ಮಾಡಲಾಗಿತ್ತು. ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸೆ ನೇತೃತ್ವದಲ್ಲಿ 1 ಎಸ್ಪಿ, 1 ಎಎಸ್ಪಿ, 4 ಡಿ.ವೈ.ಎಸ್ಪಿ, 20 ಸಿ.ಪಿ.ಐ, 2 ಕೆ.ಎಸ್.ಆರ್.ಪಿ ಸೇರಿದಂತೆ 500 ಜನ ಪೊಲೀಸರಿಂದ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಆದರೆ, ಇದೀಗ ಸಿಎಂ ಭೇಟಿ ದಿಢೀರಾಗಿ ರದ್ದಾಗಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments