ವಿಶಾಖಪಟ್ಟಂ: ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಗೆದ್ದಿದ್ದು, ಆಂಧ್ರಪ್ರದೇಶದ ವಿಶಾಖಪಟ್ಟಣಂ ದಲ್ಲಿರುವ ಸಿಂಹಾಚಲಂನ ಶ್ರೀ ವರಾಹ ಲಕ್ಷ್ಮಿ ನರಸಿಂಹಸ್ವಾಮಿಯ ದರ್ಶನ ಪಡೆದಿದ್ದಾರೆ..
ಕೊಹ್ಲಿ ಮತ್ತು ವಾಷಿಂಗ್ಟನ್ ಸುಂದರ್ ಅವರು ದೇವರ ದರ್ಶನಕ್ಕೂ ಮುನ್ನ ಸಾಂಪ್ರದಾಯಿಕ ಕಪ್ಪಸ್ತಂಭಂ ಅಲಿಂಗನಂ ಆಚರಣೆಯಲ್ಲಿ ಭಾಗವಹಿಸಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೇವರ ದರ್ಶನ ಪಡೆದ ಬಳಿಕ ಕೊಹ್ಲಿ ಮತ್ತು ವಾಷಿಂಗ್ಟನ್ ಸುಂದರ್ ಅವರಿಗೆ ವೇದಾಶೀರ್ವಚನ ನೀಡಲಾಯಿತು. ಆನಂತರ ಅವರು ತೀರ್ಥ ಪ್ರಸಾದ ಸ್ವೀಕರಿಸಿದರು ಎಂದು ಅವರು ವಿವರಿಸಿದ್ದಾರೆ.
ಇದೇ ವೇಳೆ ಟೀಮ್ ಇಂಡಿಯಾ ಆಟಗಾರರಿಗೆ ದೇವಾಲಯದ ಶೇಷ ವಸ್ತ್ರವನ್ನು ನೀಡಿ ಸನ್ಮಾನಿಸಲಾಯಿತು ಎಂದು ಅವರು ಹೇಳಿದ್ದಾರೆ. ಡಿಸೆಂಬರ್ 6ರಂದು ವಿಶಾಖಪಟ್ಟಣದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್.ರಾಹುಲ್ ನಾಯಕತ್ವದ ಟೀಮ್ ಇಂಡಿಯಾ ಒಂಬತ್ತು ವಿಕೆಟ್ ಅಂತರದಿಂದ ಗೆಲುವು ಸಾಧಿಸಿತ್ತು. ಇದರೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ 2-1 ಅಂತರದಿಂದ ಗೆದ್ದುಕೊಂಡಿತ್ತು.


