ವರದಿ : ಕುಮಾರ್, ಕೋಲಾರ
ಕೋಲಾರ : ವೇಮಗಲ್ ಕೈಗಾರಿಕಾ ಪ್ರದೇಶ ಸ್ಥಾಪನೆ ಯಾದ ನಂತರ ಸುತ್ತಮುತ್ತಲ ಪ್ರದೇಶ ವೇಗವಾಗಿ ಅಭಿವೃದ್ಧಿ ಕಾಣುತ್ತಿದ್ದು ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ಘೋಷಣೆಯಾಗಿ ವರ್ಷಗಳು ಕಳೆದರೂ ಇಲ್ಲಿನ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದ್ದು ಈ ನಿಟ್ಟಿನಲ್ಲಿ ಬುಧವಾರ ಶಾಸಕ ಕೊತ್ತೂರು ಮಂಜುನಾಥ್ ವೆಮಗಲ್ ಹಾಗೂ ಕುರಗಲ್ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.

ಹೆಸರಿಗೆ ಮಾತ್ರ ಪಟ್ಟಣ ಪಂಚಾಯಿತಿ ಎಂದು ಕರೆಸಿಕೊಂಡಿರುವ ವೇಮಗಲ್ – ಕುರಗಲ್ ಪಟ್ಟಣ ಪಂಚಾಯಿತಿ ಸುತ್ತಮುತ್ತಲಿನ ಪ್ರದೇಶದಲ್ಲಿ ಹಲವಾರು ಮದ್ಯಮ ಹಾಗೂ ಸಣ್ಣ ಕೈಗಾರಿಕೆಗಳಿದ್ದು ಸಾವಿರಾರು ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಇನ್ನು ವೇಮಗಲ್ ಪಟ್ಟಣ ವೇಗವಾಗಿ ಬೆಳೆಯುತ್ತಿದ್ದು ಇಲ್ಲಿ ರಸ್ತೆ ಸೇರಿದಂತೆ ಹಲವಾರು ಮೂಲಭೂತ ಸೌಕರ್ಯಗಳ ಕೊರತೆಗಳ ಆಗರವೇ ಎದ್ದು ಕಾಣುತ್ತಿದೆ . ಇದ್ದಕ್ಕೆ ಪೂರಕವಾಗಿ ಬುಧವಾರ ಕುರಗಲ್ ಗ್ರಾಮದ ಮುಖ್ಯ ರಸ್ತೆಯ ಡಾಂಬರೀಕರಣ , ವೇಮಗಲ್ ನಲ್ಲಿ ಇಂದಿರಾ ಕ್ಯಾಂಟೀನ್ ಗುದ್ದಲಿ ಪೂಜೆ , ಚನ್ನಪ್ಪನಹಳ್ಳಿ ಮುಖ್ಯ ರಸ್ತೆಯ ದುರಸ್ತಿ ಹಾಗೂ ಡಾಂಬರೀಕರಣ ವೇಮಗಲ್ ಪ್ರವಾಸಿ ಮಂದಿರ ಪಕ್ಕದ ರಸ್ತೆಯ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಚಾಲನೆಯನ್ನು ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಎಮ್ ಎಲ್ ಸಿ ಅನಿಲ್ ಕುಮಾರ್ ಚಾಲನೆ ನೀಡಿದರು , ಇನ್ನು ಇದೇ ಕಾರ್ಯಕ್ರಮದಲ್ಲಿ 136 ಮಕ್ಕಳಿಗೆ ಸಹಾಯ ಧನ ವಿತರಣೆ ಹಾಗೂ ಪೌರ ಕಾರ್ಮಿಕರಿಗೆ ಹಾಗೂ ಜಲಗಾರರಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು.


