
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವು ಮಹತ್ವದ ಕ್ರಮ ಕೈಗೊಂಡಿದೆ. ವಿವಾದಾತ್ಮಕ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ನೇರವಾಗಿ ಹೆಸರು ಕೇಳಿಬಂದಿದ್ದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಿ ಕೆಪಿಸಿಸಿ ಆದೇಶ ಹೊರಡಿಸಿದೆ.
ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕೃಪಾ ಆಳ್ವಾ ಅವರ ಹೆಸರು ಗಂಭೀರವಾಗಿ ಕೇಳಿಬಂದಿತ್ತು. ಈ ಬೆಳವಣಿಗೆಯು ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಮತ್ತು ಸರ್ಕಾರಕ್ಕೆ ತೀವ್ರ ಮುಜುಗರವನ್ನುಂಟುಮಾಡಿತ್ತು.
ಕೃಪಾ ಆಳ್ವಾಗೆ ಕೆಪಿಸಿಸಿಯಿಂದ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ, ಈವರೆಗೆ ಅವರು ಯಾವುದೇ ಅಧಿಕೃತ ಉತ್ತರ ಅಥವಾ ಸಮಜಾಯಿಷಿಯನ್ನು ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಶಿಸ್ತು ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿ, ಕೆಪಿಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.




