Top Newsಕ್ರೈಂ ಸ್ಟೋರಿರಾಜ್ಯಸುದ್ದಿ

KSDL ಅಧಿಕಾರಿ ಆತ್ಮಹತ್ಯೆ ಪ್ರಕರಣ : ಕೈಯಲ್ಲಿ ಡೆತ್‌ನೋಟ್‌ ಹಿಡ್ಕೊಂಡು ಅಧಿಕಾರಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಕೆ.ಎಸ್.ಡಿ.ಎಲ್ ಅಧಿಕಾರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆ.ಎಸ್.ಡಿ.ಎಲ್ ನಲ್ಲಿ ಮೆಟಿರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿ ಅಮೃತ ಸಿರಿಯೂರ್ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಎಂದು ಗುರುತಿಸಲಾಗಿದೆ.

ಅಮೃತ ಸಿರಿಯಾರ್ ಆತ್ಮಹತ್ಯೆಗೆ ಶರಣಾಗುವ ಮುನ್ನ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ಕೈಯಲ್ಲಿಯೇ ಡೆತ್ ನೋಟ್ ಹಿಡಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ.

ಕೆಎಸ್‌ಡಿಎಲ್‌ ಮೆಟಿರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಮೃತ್ ಸಿರಿಯೂರ್ ಡೆತ್‌ನೋಟ್‌ನಲ್ಲಿ ಹಿರಿಯ ಅಧಿಕಾರಿಗಳ ಹೆಸರನ್ನು ಉಲ್ಲೇಖ ಮಾಡಿದ್ದಾರೆ. ಕೆಲಸದ ಸಂಬಂಧ ಒತ್ತಡ ಹಾಗೂ ಕಿರುಕುಳ ನೀಡುತ್ತಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ಆರೋಪಿಸಿದ್ದಾರೆ.

ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದು ಇಂದು ಪ್ರಕರಣ ಬೆಳಕಿಗೆ ಬಂದಿದೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

 

 

Comments (0)

Your email address will not be published. Required fields are marked *

Back to top button