ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕ್ಯಾಂಟರ್ ಡಿಕ್ಕಿಯಾಗಿ ಸಾರಿಗೆ ಬಸ್ ಟಿಕೆಟ್ ಚೆಕ್ಕಿಂಗ್ಗೆ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ನಡೆದಿದೆ.. ಕೆಎಸ್ ಆರ್ ಟಿಸಿ ಬಸ್ ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತ ಶಕುನಿಗೌಡ (57) ಎಂದು ಗುರುತಿಸಲಾಗಿದೆ.
ನಲ್ಲೂರು-ಮಗ್ಗೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಬಸ್ ಅನ್ನು ತಡೆದು, ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸುವ ಶಕುನಿ ಗೌಡ ರಸ್ತೆ ದಾಟುತ್ತಿದ್ದ ವೇಳೆ ಲಾರಿ ಅವರಿಗೆ ಢಿಕ್ಕಿ ಹೊಡೆದು ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಶಕುನಿಗೌಡ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ..
ಘಟನಾ ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಚಾಲಕನ ಪತ್ತೆಗೆ ತನಿಖೆ ಮುಂದುವರಿದಿದೆ.


