ಉತ್ತರ ಕನ್ನಡ: KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮೂರ್ಕಿ ಕ್ರಾಸ್ ಬಳಿ ನಡೆದಿದೆ.. ಪರಿಣಾಮ ಬಸ್ನಲ್ಲಿದ್ದ ಸುಮಾರು 29 ಪ್ರಯಾಣಿಕರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ..
ಬಾದಾಮಿಯಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಬಸ್ ಸೂಳೆಮೂಕಿ ಕ್ರಾಸ್ ಬಳಿ ವೇಗವಾಗಿ ಸಾಗಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹಳಕ್ಕೆ ಪಲ್ಟಿಯಾಗಿದೆ.. ಈ ಘಟನೆ ಬೆಳಗ್ಗೆ ಸಂಭವಿಸಿದ್ದು, ಬಸ್ನಲ್ಲಿದ್ದ ಪ್ರಯಾಣಿಕರು ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನಕ್ಕೆ ತೆರಳಿದ್ದರು..
ಲಕ್ಷ ದೀಪೋತ್ಸದ ಹಿನ್ನೆಲೆ ಅನೇಕ ಭಕ್ತರು ಬಾದಾಮಿಯಿಂದ ಧರ್ಮಸ್ಥಳಕ್ಕೆ ಸಾರಿಗೆ ಬಸ್ ಮೂಲಕ ಪ್ರಯಾಣಿಸುತ್ತಿದ್ದರು.. ಬಸ್‌ನಲ್ಲಿ ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಸೇರಿದಂತೆ ವಿವಿಧ ವಯೋಮಾನದ ಪ್ರಯಾಣಿಕರು ಇದ್ದರು. ಉರುಳಿದ ಬಸ್ ಹಳ್ಳದಲ್ಲಿ ಸಿಲುಕಿ ಹಾಕಿಕೊಂಡಿದ್ದು, ಸ್ಥಳೀಯರು ಮತ್ತು ರಸ್ತೆಯಲ್ಲಿ ಸಾಗುತ್ತಿದ್ದ ಇತರ ವಾಹನಗಳ ಚಾಲಕರು ತಕ್ಷಣ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ.
ಸ್ಥಳಕ್ಕೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಧಾವಿಸಿ, ಬಸ್‌ನ ಡ್ರೈವರ್ ಮತ್ತು ಕಂಡಕ್ಟರ್‌ಗಳ ಸ್ಥಿತಿ ಏನು ಎಂಬುದು ತಿಳಿದುಬಂದಿಲ್ಲ. ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸಿ, ಬಸ್‌ನ್ನು ತೆಗೆದುಹಾಕಿ ಸಂಚಾರ ಸುಗಮಗೊಳಿಸಿದರು. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಅಪಘಾತಕ್ಕೆ ಸಂಬಂಧಿಸಿದ ಪ್ರಕರಣ ದಾಖಲಿಸಲಾಗಿದೆ.


