ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ನ ಚಕ್ರಕ್ಕೆ ಸಿಲುಕಿ ನಾಡಬಾಂಬ್ ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಿರೇಕಲವತ್ತಿ ಗ್ರಾಮದಲ್ಲಿ ಘಟನೆ ನಡೆದಿದೆ..
ಬಸ್ ಮುಡಬಸಿದ್ದಾಪುರದಿಂದ ಶಿಕಾರಿಪುರಕ್ಕೆ ತೆರಳುತ್ತಿತ್ತು, ಹಿರೇಕಲವತ್ತಿ ಗ್ರಾಮದ ಬಳಿ ಬರುತ್ತಿದ್ದಾಗ ಸ್ಫೋಟ ಸಂಭವಿಸಿದ್ದು, ದೊಡ್ಡ ಶಬ್ದ ಕೇಳಿಬಂದಿದ್ದು, ಶಬ್ದಕ್ಕೆ ನಿಯಂತ್ರಣ ಕಳೆದುಕೊಂಡ ಬಸ್ ಚಾಲಕ ಪಕ್ಕದಲ್ಲಿದ್ದ ಟಿಸಿಗೆ ಡಿಕ್ಕಿ ಹೊಡೆದಿದೆ.. ತಕ್ಷಣ ಬಸ್ ನಿಲ್ಲಿಸಿ ಚಾಲಕ ಹಾಗೂ ನಿರ್ವಾಹಕರಿಬ್ಬರೂ ಕೆಳಗೆ ಬಂದು ಪರಿಶೀಲಿಸಿದಾಗ, ನಾಡಬಾಂಬ್ ಸ್ಫೋಟಗೊಂಡಿರುವುದು ಬೆಳಕಿಗೆ ಬಂದಿದೆ.. ಬಸ್ಸಿನ ಟೈಯರ್ ಅಂಚಿಗೆ ತಗುಲಿ ನಾಡಬಾಂಬ್ ಸ್ಫೋಟಗೊಂಡಿದ್ದರಿಂದ ದುರಂತದ ಪ್ರಮಾಣ ಕಡಿವೆ ಆಗಿ, ಬಸ್ನಲ್ಲಿ ಇದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ..
ಘಟನೆಯ ನಂತರ ಪ್ರತಿಕ್ರಿಯಿಸಿದ ಬಸ್ ಚಾಲಕ ಬಸವರಾಜ್ ಅವರು, ನಾಡಬಾಂಬ್ ಸ್ಫೋಟಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದು, ಸ್ಫೋಟದ ಹಿಂದಿನ ಉದ್ದೇಶ ಮತ್ತು ಬಾಂಬ್ ಇಟ್ಟವರು ಯಾರು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಇನ್ನು ಹಂದಿಗಳಿಂದ ತಮ್ಮ ಬೆಳೆಯನ್ನು ರಕ್ಷಿಕೊಳ್ಳಲು ರೈತರು ನಾಡಬಾಂಬ್ಗಳನ್ನು ಬಳಸುತ್ತಿದ್ದು, ಬಾಂಬ್ ಕೊಂಡೊಯ್ಯುವ ವೇಳೆ ರಸ್ತೆಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ..


