Tuesday, January 27, 2026
26.9 C
Bengaluru
Google search engine
LIVE
ಮನೆಕ್ರೈಂ ಸ್ಟೋರಿFIR ರದ್ದು ಕೋರಿ ಬಾಂಬೆ ಹೈಕೋರ್ಟ್​ ಮೊರೆ ಹೋದ ಕುನಾಲ್ ಕಾಮ್ರಾ ಅರ್ಜಿ

FIR ರದ್ದು ಕೋರಿ ಬಾಂಬೆ ಹೈಕೋರ್ಟ್​ ಮೊರೆ ಹೋದ ಕುನಾಲ್ ಕಾಮ್ರಾ ಅರ್ಜಿ

ಮುಂಬೈ: ಖ್ಯಾತ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ  ಅವರು ಮುಂಬೈ ಪೊಲೀಸರು ದಾಖಲಿಸಿದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಕುನಾಲ್ ಕಾಮ್ರಾ ತಮ್ಮ ಇತ್ತೀಚಿನ ಸ್ಟ್ಯಾಂಡ್-ಅಪ್ ಕಾಮಿಡಿ ಕಾರ್ಯಕ್ರಮ `ನಯಾ ಭಾರತ್’ನಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಪರೋಕ್ಷವಾಗಿ `ಗದ್ದಾರ್’ (ದ್ರೋಹಿ) ಎಂದು ಕರೆದಿದ್ದರು. ಈ ಪ್ರದರ್ಶನವು ಮುಂಬೈನ ಖಾರ್ ಪ್ರದೇಶದ ಹ್ಯಾಬಿಟ್ಯಾಟ್ ಸ್ಟುಡಿಯೋದಲ್ಲಿ ನಡೆದಿದ್ದು, ಇದರ ವೀಡಿಯೋ ಯೂಟ್ಯೂಬ್‌ನಲ್ಲಿ ಪ್ರಕಟವಾದ ನಂತರ ವೈರಲ್ ಆಗಿತ್ತು

ಈ ಘಟನೆಯ ಬಳಿಕ, ಶಿವಸೇನೆ ಶಾಸಕ ಮುರ್ಜಿ ಪಟೇಲ್ ಅವರು ಕಾಮ್ರಾ ವಿರುದ್ಧ ದೂರು ದಾಖಲಿದ್ದರು. ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 353(1)(ಬಿ) (ಸಾರ್ವಜನಿಕ ಶಾಂತಿಭಂಗಕ್ಕೆ ಕಾರಣವಾಗುವ ಹೇಳಿಕೆ) ಮತ್ತು 356(2) (ಮಾನಹಾನಿ) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ವಿವಾದ ತಾರಕಕ್ಕೇರಿದ ನಂತರ ಕಾಮ್ರಾ ತಮಿಳುನಾಡಿನಲ್ಲಿ ಇರುವ ಕಾರಣ ಮದ್ರಾಸ್ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಮಾ. 28ರಂದು ಮದ್ರಾಸ್ ಹೈಕೋರ್ಟ್ ಅವರಿಗೆ ಏ. 7ವರೆಗೆ ಮಧ್ಯಂತರ ಪೂರ್ವಭಾವಿ ಜಾಮೀನು ಮಂಜೂರು ಮಾಡಿತ್ತು. ಆದರೆ, ಈ ಅವಧಿ ಮುಗಿದ ನಂತರ, ಕಾಮ್ರಾ ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್ ರದ್ದುಗೊಳಿಸಲು ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದು ಏ. 21ರಂದು ನ್ಯಾ.ಸಾರಂಗ್ ಕೊತ್ವಾಲ್ ಮತ್ತು ಶ್ರೀರಾಮ್ ಎಂ. ಮೊದಕ್ ಅವರ ಪೀಠದ ಮುಂದೆ ವಿಚಾರಣೆಗೆ ಬರಲಿದೆ.

ಎಫ್‌ಐಆರ್ ತಮ್ಮ ಮೂಲಭೂತ ಹಕ್ಕುಗಳಾದ ಅಭಿವ್ಯಕ್ತಿ ಸ್ವಾತಂತ್ರ‍್ಯ (ವಿಧಿ 19(1)(ಎ)), ಯಾವುದೇ ವೃತ್ತಿ ಅಥವಾ ವ್ಯಾಪಾರ ನಡೆಸುವ ಹಕ್ಕು (ವಿಧಿ 19(1)(ಜಿ)), ಮತ್ತು ಜೀವನ ಮತ್ತು ಸ್ವಾತಂತ್ರ‍್ಯದ ಹಕ್ಕು (ವಿಧಿ 21)ಗಳನ್ನು ಉಲ್ಲಂಘಿಸುತ್ತದೆ ಎಂದು ತಮ್ಮ ಅರ್ಜಿಯಲ್ಲಿ ಕುನಾಲ್ ಕಾಮ್ರಾ ಉಲ್ಲೇಖಿಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments