ಬೆಂಗಳೂರು: ಕ್ವಿನ್ ಸಿಟಿ (KWIN City) ವೈಶಿಷ್ಟ್ಯ ಪೂರ್ಣ ಯೋಜನೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ (MB Patil) ತಿಳಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಗುರುವಾರ ನಡೆದ ಕ್ವಿನ್ ಸಿಟಿ (ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರ) ಯೋಜನೆ ಉದ್ಘಾಟನೆ ಬಳಿಕ ಅವರು ಮಾತನಾಡಿದರು.ಇದನ್ನೂ ಓದಿ: ಜಮೀರ್ ರೀತಿಯ ಹೊಗಳುಭಟ್ಟರ ಮಾತು ಕೇಳಬೇಡಿ: ಸಿದ್ದರಾಮಯ್ಯಗೆ ಸಿ.ಟಿ.ರವಿ ಸಲಹೆ
ಒಟ್ಟು 5,800 ಎಕರೆಯಲ್ಲಿ ಕ್ವಿನ್ ಸಿಟಿಯನ್ನು ಅಭಿವೃದ್ಧಿಪಡಿಸುವ ಉದ್ದೇಶವಿದ್ದು, ಮೊದಲ ಹಂತದಲ್ಲಿ 2,000 ಎಕರೆಯಲ್ಲಿ ಇದನ್ನು ಸಾಕಾರಗೊಳಿಸಲಾಗುವುದು. 5 ಲಕ್ಷ ಜನವಸತಿಯ ಗುರಿಯುಳ್ಳ ವಿನೂತನ ನಗರದ ಪರಿಧಿಯಲ್ಲಿ ಶೇ.40ರಷ್ಟು ಜಾಗವನ್ನು ಉದ್ಯಾನವನಗಳಿಗೆ ಮೀಸಲಿಡಲಾಗಿದೆ. ಜೊತೆಗೆ 0.69 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕಕ್ಕೆ 465 ಎಕರೆ, ವರ್ಷಕ್ಕೆ 7 ಸಾವಿರ ಟನ್ ಹಣ್ಣು-ತರಕಾರಿ ಬೆಳೆಯಲು 200 ಎಕರೆ, ಶೇ.50ರಿಂದ 70ರಷ್ಟು ಜಲ ಮರುಪೂರಣ ವ್ಯವಸ್ಥೆ ಇರಲಿದೆ ಎಂದರು.