ಬೆಳಗಾವಿ : ರಾಜ್ಯದಲ್ಲಿ ಲೋಕಸಭಾ ಚುನಾವಣೆಗೂ ಮುನ್ನವೇ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ವಾಪಸ್ ಬಂದ ಮಾದರಿಯಲ್ಲೇ ಶಾಸಕ ಲಕ್ಷ್ಮಣ ಸವದಿ ಕೂಡ ಬಿಜೆಪಿ ಸೇರುತ್ತಾರೆಂಬ ವದಂತಿ ಹರಡಿದೆ. ಇದರ ಬೆನ್ನಲ್ಲಿಯೇ ಲಕ್ಷ್ಮಣ ಸವದಿ ಕೇಂದ್ರ ಸರ್ಕಾರದ ವಿರುದ್ಧ ತೊಡೆ ತಟ್ಟಿ ತಾವು ಬಿಜೆಪಿಗೆ ಸೇರುವುದಿಲ್ಲ ಎಂದಿದ್ದಾರೆ.
ಬೆಳಗಾವಿ ಜಿಲ್ಲೆ ಅಥಣಿ ಯಕ್ಕಂಚ್ಚಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಹೊಗುದಿಲ್ಲ. ನಾನು ಬೀದರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಕೇಳಿ ಬರುತ್ತಿವೆ. ನಾನು ಮಾದ್ಯಮದಲ್ಲಿ ನೋಡಿ ಅಚ್ಚರಿ ಮೂಡಿಸಿದೆ. ಎತ್ತಣ ಮಾಮರ ಎತ್ತಣ ಕೋಗಿಲೆ ಎತ್ತಿಂದೆತ್ತ ಸಂಬಂಧವಯ್ಯಾ? ಎಲ್ಲಿಂದ ಎಲ್ಲಿಗೆ ಸಂಬಂದ.. ಆ ಸುದ್ದಿ ಎಲ್ಲವೂ ಸುಳ್ಳು. ನಾನು ಯಾವುದೇ ಕಾರಣಕ್ಕೂ ಲೋಕಸಭಾ ಚುನಾವಣೆ ಸ್ವರ್ಧೆ ಮಾಡುವುದಿಲ್ಲ. ನಾನು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗಲ್ಲ ಎಂದರು..
ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಕೇಂದ್ರ ಸರ್ಕಾರದ ನೀತಿಯನ್ನು ನಾವು ಖಂಡಿಸುತ್ತೇವೆ. ನಮಗೆ ಬರಬೇಕಾದ ಅನುದಾನ ಪಾಲನ್ನು ಕೊಡುತ್ತಿಲ್ಲ. ಇದರಿಂದ ನಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ದೆಹಲಿಗೆ ಹೋಗಿ ಪ್ರತಿಭಟನೆ ಮಾಡುತ್ತೇವೆ. ದೆಹಲಿಯಲ್ಲಿ ಕುಳಿತು ಸಾಂಕೇತಿಕ ಪ್ರತಿಭಟನೆ ಮಾಡುತ್ತೇವೆ. ಕೇಂದ್ರದಿಂದ ಬರಬೇಕಾದ ಅನುದಾನ ಬರುತ್ತಿಲ್ಲ. 136 ಶಾಸಕರು ಜೊತೆಯಾಗಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.