Top Newsರಾಜಕೀಯ

ಬಿಜೆಪಿಯವರು ಕೋಮು ಕನ್ನಡಿಯಿಂದ ನೋಡಬಾರದು: ಸಚಿವೆ ಲಕ್ಷ್ಮಿ 

ಬೆಂಗಳೂರು: ಬಿಜೆಪಿಯವರು ಹಿಂದೂ, ಮುಸ್ಲಿಂರೆಂದು ಭೂತ ಕನ್ನಡಿಯಿಂದ ನೋಡುವುದನ್ನು ಬಿಡಬೇಕು. ಸಾಮಾಜಿಕ ಬದ್ಧತೆಯಿಂದ ಎಲ್ಲವನ್ನೂ ನೋಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಿಂದೂ ಸಂಘಟನೆಗಳನ್ನು ಸರ್ಕಾರ ಟಾರ್ಗೆಟ್ ಮಾಡುತ್ತಿದೆ ಎಂಬ ಬಿಜೆಪಿಯ ಸುನೀಲ್ ಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿದರು. ಮೊದಲು ಸುನೀಲ್ ಕುಮಾರ್ ಅವರು ಮಾತನಾಡುವಾಗ ಜವಾಬ್ದಾರಿಯುತವಾಗಿ ಮಾತನಾಡಬೇಕೆಂದು ತಿರುಗೇಟು ನೀಡಿದ್ರು.

ನಾನೂ ಕೂಡ ಹಿಂದೂನೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಲ್ಲೆ ರಾಮ ಇದ್ದಾನೆ. ಮಹಾತ್ಮಾ ಗಾಂಧಿ ಪಕ್ಷದವರು‌ ನಾವು. ರಾಮನ ಮೇಲೆ ನಮಗೂ ಭಕ್ತಿ ಇದೆ. ಬಿಜೆಪಿಯವರು ಹಿಂದೂ, ಮುಸ್ಲಿಂ ವಿಷಯದಲ್ಲಿ ರಾಜಕೀಯ ‌ಮಾಡಿಕೊಂಡು ಬರುತ್ತಿದ್ದಾರೆ ಎಂದು ಸಚಿವೆ ಹೆಬ್ಬಾಳ್ಕರ್ ಆಕ್ರೋಶ ಹೊರಹಾಕಿದ್ರು.

ನಾವು ಯಾರನ್ನೂ ಟಾರ್ಗೆಟ್ ಮಾಡುವ ಅನಿವಾರ್ಯತೆ ಇಲ್ಲ. ಬಿಜೆಪಿಗೆ ಮಾತ್ರ ಅಂತಹ ಅನಿವಾರ್ಯತೆ ಇದೆ ಎಂದು ಟೀಕ ಮಾಡಿದ್ರು. ಉಡುಪಿಯಲ್ಲಿ ಕಾನೂನು ಸುವ್ಯವಸ್ಥೆ ಸುಸ್ಥಿತಿಯಲ್ಲಿದೆ. ಅವಿಭಾಜ್ಯ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸರಿ ಮಾಡುತ್ತೇವೆ ಎಂದು ಸಚಿವೆ ಹೇಳಿದರು.

 

Comments (0)

Your email address will not be published. Required fields are marked *

Back to top button