ಬೆಂಗಳೂರು: ಸುಪ್ರೀಂಕೋರ್ಟ್ನಿಂದ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದ್ದು, ಈ ಹಿನ್ನೆಲೆ ಆರೋಪಿಗಳಾದ ಎ1 ಪವಿತ್ರಾಗೌಡ ಮತ್ತು ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್‌ಮೆಂಟ್‌ನಲ್ಲಿದ್ದ ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಇದಕ್ಕೂ ಮುಂಚೆ ದರ್ಶನ್ ಅವರು ಕೋರ್ಟ್ ಮುಂದೆ ಹಾಜರಾಗುತ್ತಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಆದ್ರೆ ಅದಕ್ಕೂ ಮೊದಲೇ ಪೊಲೀಸರು ಅಪಾರ್ಟ್ಮೆಂಟ್ಗೆ ತೆರಳಿ ಅವರನ್ನು ಬಂಧಿಸಿದ್ದಾರೆ.


