#Exclusive Newsಜನಸಾಮಾನ್ಯರ ದನಿ

ಲಾಯರ್ ಜಗದೀಶ್​ ಗೆ ಬೇಲ್.. ಆದರೆ..?

ಇಂದು ವಕೀಲ ಕೆಎನ್ ಜಗದೀಶ್ ಅವರಿಗೆ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಆದರೆ, ಜಾಮೀನಿನ ಪ್ರಕ್ರಿಯೆಗಳು ಮುಗಿದಿಲ್ಲ. ನಾಳೆ ಸರ್ಕಾರಿ ರಜೆ ಇರುವ ಕಾರಣ ನಾಡಿದ್ದು ಅವರು ಪರಪ್ಪನ ಅಗ್ರಹಾರ ಜೈಲಿಂದ ಬಿಡುಗಡೆ ಆಗುವ ನಿರೀಕ್ಷೆ ಇದೆ. ತಮಗೆ ಜಾಮೀನು ಸಿಕ್ಕಿರುವ ಬಗ್ಗೆ ವಕೀಲ ಕೆಎನ್ ಜಗದೀಶ್ ಕುಮಾರ್ ತಮ್ಮ ಫೇಸ್ ಬುಕ್ ಪೇಜ್​ನಲ್ಲಿ ಹೀಗೆ ಬರೆದುಕೊಂಡಿದ್ದಾರೆ

ನಮಸ್ತೆ ಕರ್ನಾಟಕ, ನಾನು ಕೆ.ಎನ್. ಜಗದೀಶ್ ಕುಮಾರ್, ಹಲವು ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ಧೀರ ಹೋರಾಟ ನಡೆಸುತ್ತಿರುವ ಹೋರಾಟಗಾರ…,

• PSI ಹಗರಣವನ್ನು ಬಯಲು ಮಾಡಿದ್ದು ,
• ADGP ಅಮೃತಪಾಲ್ ಅವರನ್ನು ಜೈಲಿಗೆ ಕಳಿಸಿದ್ದು ನಮ್ಮ ಟೀಂ,
• ದೊಡ್ಡ ರಾಜಕಾರಣಿಗಳ ಸೆಕ್ಸ್ ಸ್ಕ್ಯಾಂಡನ್ನು ಬಹಿರಂಗಪಡಿಸಿದ್ದು ,
• ರವಿ ಚೆನ್ನಣ್ಣನವರ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದು ,
• ಟ್ರಾಫಿಕ್ ಟೋವಿಂಗ್ ಸಿಸ್ಟಂ ಅನ್ನು ನಿಲ್ಲಿಸಿದ್ದು ,
• ಕೊಡಿಗೆಹಳ್ಳಿ ಸುತ್ತಮುತ್ತ ಡ್ರಗ್ಸ್ ವಿರುದ್ಧ ಹೋರಾಟ ನಡೆಸಿದ್ಧು
ಇವೆಲ್ಲವೂ ನನ್ನ ಹೋರಾಟದ ಭಾಗ!

ಈ ಧೈರ್ಯದ ಹೋರಾಟವನ್ನು ಸಹಿಸದ ಭ್ರಷ್ಟ ರಾಜಕೀಯ ಮತ್ತು ಪೊಲೀಸ್ ವ್ಯವಸ್ಥೆ, ನನ್ನ ಮತ್ತು ನನ್ನ ಮಗನ ವಿರುದ್ಧ ಸಂಚು ರೂಪಿಸಿ, 25/01/2025 ರಂದು ಸ್ಥಳಿಯ ಪುಂಡರಿಂದ ನನಗೆ ಮಾರಣಾಂತಿಕ ಹಲ್ಲೆ ನಡೆಸಿ, ಅಕ್ರಮವಾಗಿ ಜೈಲಿಗೆ ಕಳುಹಿಸಲಾಗಿತ್ತು. ಇವತ್ತಿಗೆ 93 ದಿನಗಳ ನಂತರ ನನಗೆ ನ್ಯಾಯ ಸಿಕ್ಕಿದೆ. ಜಾಮೀನು ಲಭಿಸಿದೆ. ನ್ಯಾಯಕ್ಕಾಗಿ ನನ್ನ ಹೋರಾಟ ಇನ್ನೂ ಜೀವಂತವಿದೆ! ನಾನು ಶರಣಾಗುವುದಿಲ್ಲ! ಜೈ ಕರ್ನಾಟಕ!
ಎಂದು ವಕೀಲ ಕೆಎನ್ ಜಗದೀಶ್​ ತಮ್ಮ ಫೇಸ್​ ಬುಕ್​ ವಾಲ್​​ನಲ್ಲಿ ಬರೆದುಕೊಂಡಿದ್ದಾರೆ

 

Comments (0)

Your email address will not be published. Required fields are marked *

Back to top button