Top Newsಕ್ರೈಂ ಸ್ಟೋರಿರಾಜ್ಯಸುದ್ದಿ
ವಕೀಲೆ ಜೀವಾ ಆತ್ಮಹತ್ಯೆ ಕೇಸ್; ಡಿವೈಎಸ್ಪಿ ಕನಕಲಕ್ಷ್ಮಿ ಅರೆಸ್ಟ್

ವಕೀಲೆ ಜೀವಾ ಅತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಭೋವಿ ಅಭಿವೃದ್ದಿ ನಿಗಮ ಅಕ್ರಮದ ತನಿಖೆ ಎದುರಿಸಿದ್ದ ವಕೀಲೆ ಜೀವಾ ಕೇಸ್ನಲ್ಲಿ ಇದೀಗ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಭೋವಿ ನಿಗಮ ಹಗರಣದ ತನಿಖೆ ಎದುರಿಸುವಾಗ ಪೋಲಿಸ್ ಅಧಿಕಾರಿ ವಿವಸ್ರ್ತಗೊಳಿಸಿ ವಿಚಾರಣೆ ನಡೆಸಿದ್ದರು, ಅಲ್ಲದೇ 25ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಮಹಿಳಾ ವಕೀಲೆ ಜೀವಾ 13 ಪುಟಗಳ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣದ ಸಂಬಂಧ ಡಿವೈಎಸ್ಪಿ ಕನಕಲಕ್ಷ್ಮಿ ವಿರುದ್ಧ ಜೀವಾ ಸಹೋದರಿ ದೂರು ನೀಡಿದ್ದರು.
ಡಿವೈಎಸ್ಪಿ ಕನಕಲಕ್ಷ್ಮಿ ವಿರುದ್ದ 22 ನವೆಂಬರ್ 2024ರಂದು ಬನಶಂಕರಿ ಪೋಲಿಸರು ಕನಕಲಕ್ಷ್ಮಿ ವಿರುದ್ದ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7(ಎ) ಮತ್ತು ಬಿಎನ್ಎಸ್ ಸೆಕ್ಷನ್ 108ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಎಸ್ಐಟಿ ಅಧಿಕಾರಿಗಳು ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ.




