ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ..
ಹೈಕಮಾಂಡ್ ಏನು ಹೇಳುತ್ತದೆಯೋ ಅದೇ ಅಂತಿಮ. ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆಪ್ರತಿಯೊಬ್ಬ ನಾಯಕನೂ ಅದೇ ಕ್ರಮವನ್ನು ಅನುಸರಿಸಬೇಕು ಎಂದು ಹೇಳಿದರು.. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡುವುದಕ್ಕೂ ಮೊದಲು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಹೈಕಮ್ಯಾಂಡ್ ನಾನೇ ಮುಂದುವರೆಯಬೇಕು ಎಂದರೆ ನಾನೇ ಮುಂದುವರೆಯುತ್ತೇನೆ. ಎಲ್ಲವನ್ನೂ ಹೈಕಮ್ಯಾಂಡ್ ನಿರ್ಧರಿಸುತ್ತದೆ ಎಂದು ಸಿದ್ದು ಮತ್ತೊಮ್ಮೆ ಹೇಳಿದರು.
ಹೈಕಮಾಂಡ್ 4-5 ತಿಂಗಳ ಹಿಂದೆಷ್ಟೇ ಸಚಿವ ಸಂಪುಟ ಪುನಾರಚನೆ ಮಾಡಿ ಎಂದು ಹೇಳಿದ್ದರು. ಎರಡೂವರೆ ವರ್ಷ ತುಂಬಲಿ ಆಮೇಲೆ ಮಾಡೋಣ ಅಂದೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತಾರೆ ಅದರಂತೆ ನಡೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ಧಾರೆ.
ಇನ್ನು ಬಿಜೆಪಿಯವರು ಬರಿ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸಿಮರು. ನಮ್ಮ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಕಾಂಗ್ರೆಸ್ ಬದ್ದವಾಗಿದೆ ಎಂದರು. ಗ್ಯಾರಂಟಿ ಯೋಜನೆಗಳಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳಿದರು. ಆದರೆ ನಾವು ಗ್ಯಾರೆಂಟಿ ಯೋಜನೆ ಜಾರಿಗೊಳಿಸುವ ಜೊತೆಗೆ ಅಭಿವೃದ್ಧಿ ಕಾಮಗಾರಿಗಳನ್ನೂ ನಡೆಸುತ್ತಿದ್ದೇವೆ ಎಂದು ಬಿಜೆಪಿ ಅವರಿಗೆ ಟಾಂಗ್ ಕೊಟ್ಟಿದ್ಧಾರೆ..


