Top Newsರಾಜಕೀಯರಾಜ್ಯ

ಬಾನು ಮುಷ್ತಾಕ್​ರಿಂದ ದಸರಾ ಉದ್ಘಾಟನೆಗೆ ಶಾಸಕ ಯತ್ನಾಳ್​ ಆಕ್ರೋಶ

ಬೆಂಗಳೂರು: ಸಾಹಿತಿ ಬಾನು ಮುಷ್ತಾಕ್​ ಅವರು ದಸರಾ ಉದ್ಘಾಟಿಸುವುದಕ್ಕೆ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಯತ್ನಾಳ್​​ ನಾನು ವೈಯಕ್ತಿಕವಾಗಿ ಶ್ರೀಮತಿ ಬಾನು ಮುಷ್ತಾಕ್​ ಅವರನ್ನು ಲೇಖಕಿ ಹಾಗೈ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಫಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ದಸರಾ ಉದ್ಘಾಟಿಸುವುದು, ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ.

ಇಸ್ಲಾಂ ಮೂರ್ತಿ ಪೂಜೆಯನ್ನು ಧಿಕ್ಕರಿಸಿ ಒಂದು ದೇವರು ಹಾಗೂ ಒಂದು ಗ್ರಂಥವನ್ನೇ ಒಪ್ಪಿಕೊಳ್ಳುತ್ತದೆ ಎಂಬ ನಂಬಿಕೆಯಲ್ಲಿ ಅವರು ಇನ್ನೂ ಇದ್ದಾರೆಯೇ, ಅಥವಾ ಎಲ್ಲಾ ಮಾರ್ಗಗಳೂ ಅಂತಿಮವಾಗಿ ಒಂದೇ ಮೋಕ್ಷಕ್ಕೆ ದಾರಿ ಮಾಡಿಮಕೊಡುತ್ತೇವೆ ಎಂದು ಅವರು ನಂಬುತ್ತಾರೆಯೇ ಎಂಬುದರ ಬಗ್ಗೆ ಶ್ರೀಮತಿ ಬಾನು ಮುಷ್ತಾಕ್​ ಅವರು ಸ್ಪಷ್ಟನೆ ನೀಡುವುದು ಅಗತ್ಯ ಎಂದು ಆಗ್ರಹಿಸಿದ್ರು.

ಸ್ಪಷ್ಟತೆ ಇಲ್ಲದೆ, ದಸರಾ ಉದ್ಘಾಟಿಸುವುದು ಸರಿಯಲ್ಲ. ಆದರೆ ದಸರಾ ಉತ್ಸವದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಅಥವಾ ಕವಿಗೋಷ್ಠಿಯಂತಹ ಸಾಹಿತ್ಯ ಕಾರ್ಯಕ್ರಮಗಳನ್ನು ಉದ್ಘಾಟಿಸುವ ಅತಿಥಿಯಾಗಿ ಅವರು ಭಾಗವಹಿಸುವುದು ತಕ್ಕದ್ದಾಗಿದೆ ಎಂದು ಹೇಳಿದ್ದಾರೆ.

Comments (0)

Your email address will not be published. Required fields are marked *

Back to top button