ವೈರಲ್ ನ್ಯೂಸ್ಸುದ್ದಿ

ಗುಂಡ್ಲುಪೇಟೆ: ಕಬ್ಬಿನ ಗದ್ದೆಯಲ್ಲಿ ಬಾಲ ಬಿಚ್ಚಿದ ಚಿರತೆ-ಮುಂದೇನಾಯ್ತು ಗೊತ್ತಾ?

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡುಪ್ರಾಣಿಗಳು ರಸ್ತೆಯಲ್ಲಿ ಕಾಣಿಸಿಕೊಳ್ಳುವುದು ಹೆಚ್ಚಾಗಿಬಿಟ್ಟಿದೆ. ಹಾಗೆಯೇ ಇದೀಗ ಜಮೀನಿನಲ್ಲಿ ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಚಿರತೆಯೊಂದು ಕಾಣಿಸಿಕೊಂಡು ಕ್ಷಣಮಾತ್ರದಲ್ಲಿ ಕಾಲ್ಕಿತ್ತಿರುವ ಘಟನೆ ತಾಲೂಕಿನ ಪರಮಾಪುರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.

ಗುಂಡ್ಲುಪೇಟೆ ತಾಲೂಕಿನ ಪರಮಾಪುರ ಗ್ರಾಮದ ಶಂಭುಲಿಂಗಪ್ಪ ಎಂಬುವವರ ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಗದ್ದೆಯಲ್ಲಿ ಅಡಗಿ ಕುಳಿತಿದ್ದ ಚಿರತೆ ಹೊರ ಬಂದಿದೆ. ಇದನ್ನು ಕಂಡ ಮಾಲೀಕರು ಹಾಗು ಕೆಲಸಗಾರರು ಗಾಬರಿಗೊಂಡು ಕಬ್ಬು ಕಟಾವು ನಿಲ್ಲಿಸಿ ಜಮೀನಿನಿಂದ ಹೊರ ಬಂದಿದ್ದಾರೆ.

ಮಾಹಿತಿಯನ್ನು ಮಾಲೀಕರು ಅರಣ್ಯಾಧಿಕಾರಿಗಳಿಗೆ ತಿಳಿಸಿದ ಮೇರೆಗೆ ಎಚ್ಚೆತ್ತುಕೊಂಡ ಇಲಾಖೆ ಅಧಿಕಾರಿಗಳು ಶಂಭುಲಿಂಗಪ್ಪ ಜಮೀನಿಗೆ ಬೋನ್ ತಂದಿರಿಸಿದ್ದಾರೆ. ಜೊತೆಗೆ ಸುತ್ತಮುತ್ತಲ ಪ್ರದೇಶದಲ್ಲು ಕೂಂಬಿಂಗ್ ನಡೆಸಿದ್ದು, ಚಿರತೆ ಸುಳಿವು ಪತ್ತೆಯಾಗಿಲ್ಲ.

ಚಿರತೆ ಸೆರೆಗೆ ಒತ್ತಾಯ: ಪರಮಾಪುರ ಭಾಗದಲ್ಲಿ ಚಿರತೆ ಆಗಿಂದಾಗ್ಗೆ ಕಾಣಿಸಿಕೊಳ್ಳುತ್ತಿದ್ದು, ಕಬ್ಬಿನ ಗದ್ದೆಯಿಂದ ಓಡಿ ಹೋಗಿದೆ. ಇದರಿಂದ ರೈತರಲ್ಲಿ ಭಯದ ವಾತಾವರಣ ನಿರ್ಮಾಣ ಆಗಿದೆ. ಇದನ್ನು ತುಂಬಾ ಗಂಭೀರವಾಗಿ ತೆಗೆದುಕೊಂಡು ಶೀಘ್ರದಲ್ಲಿ ಚಿರತೆ ಸೆರೆಗೆ ಮುಂದಾಗಬೇಕು ಎಂದು ರೈತ ಮಹದೇವಪ್ಪ ಒತ್ತಾಯಿಸಿದ್ದಾರೆ.

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

Comments (0)

Your email address will not be published. Required fields are marked *

Back to top button