Thursday, November 20, 2025
19.1 C
Bengaluru
Google search engine
LIVE
ಮನೆಜಿಲ್ಲೆಇಂದಿರಾಗಾಂಧಿ ಮಾಡಿದ ಅರ್ಧ ಕೆಲಸವನ್ನಾದರೂ ಪ್ರಧಾನಿ ಮೋದಿ ಮಾಡಲಿ; ಪ್ರಿಯಾಂಕ್​ ಖರ್ಗೆ ಕಿಡಿ

ಇಂದಿರಾಗಾಂಧಿ ಮಾಡಿದ ಅರ್ಧ ಕೆಲಸವನ್ನಾದರೂ ಪ್ರಧಾನಿ ಮೋದಿ ಮಾಡಲಿ; ಪ್ರಿಯಾಂಕ್​ ಖರ್ಗೆ ಕಿಡಿ

ಕಲಬುರಗಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮಾಡಿದ ಅರ್ಧ ಕೆಲಸವನ್ನಾದರೂ ಪ್ರಧಾನಿ ನರೇಂದ್ರ ಮೋದಿ ಮಾಡಿ ತೋರಿಸಲಿ ಎಂದು ಸಚಿವ ಪ್ರಿಯಾಂಕ್​ ಖರ್ಗೆ ಸವಾಲ್​ ಹಾಕಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬ್ಯಾಂಕ್​​ಗಳ ರಾಷ್ಟ್ರೀಕರಣ, ಭೂಮಿ ಉಳುಮೆಗೆ ತಂದ ಸುಧಾರಣೆ ಹಾಗೂ ಪಾಕಿಸ್ತಾನವನ್ನು ಎರಡು ಭಾಗ ಮಾಡಿದ್ದು ಇಂದಿರಾಗಾಂಧಿ. ಇಂದಿರಾಗಾಂಧಿ‌ ಅವರು 44 ಬಾರಿ ಪತ್ರಿಕಾಗೋಷ್ಠಿ ಮಾಡಿದ್ದಾರೆ ಇವರೇನು ಮಾಡಿದ್ದಾರೆ? ಎಂದು ಪ್ರಶ್ನಿಸಿದ್ರು.

ಪ್ರಧಾನಿ ಮೋದಿ ಅವರ ಮನ್​ ಕೀ ಬಾತ್​ ಕೇಳಿ ಸಾಕಾಗಿದೆ. ಏನಾದ್ರೂ ಕೊಡುಗೆ ನೀಡಿ ಮಾತನಾಡಲಿ. ಈ ಹಿಂದೆ ಕಲಬುರಗಿ ರೊಟ್ಟಿ ಬಗ್ಗೆ ಮಾತನಾಡಿದ್ದರು. ಏನಾದರೂ‌ ಕೊಡುಗೆ ಕೊಟ್ಟಿದ್ದಾರೆಯೇ? ಈಗ ಕಲಬುರಗಿ ಕೋಟೆ ಬಗ್ಗೆ ಮಾತನಾಡಿದ್ದಾರೆ. ಮುಂದೊಂದು ದಿನ ಮತ್ತೊಂದರ ಬಗ್ಗೆ ಮಾತನಾಡುತ್ತಾರೆ. ಮೊದಲು ಏನಾದರೂ ಕೊಡುಗೆ ಕೊಡಲಿ ಬಳಿಕ ಮಾತನಾಡಲಿ ಎಂದ್ರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ್ದ ಚಕ್ರವರ್ತಿ  ಸೂಲಿಬೆಲೆ ವಿರುದ್ಧದ ದೂರು ವಜಾ ವಿಚಾರವಾಗಿ ಮಾತನಾಡಿದ ಅವರು ಆ ಬಾಡಿಗೆ ಭಾಷಣಕಾರರ‌ ಬಗ್ಗೆ ಏನು ಹೇಳಲಿ..?ನಾನು ಅವರ ವಿರುದ್ದ FIR ಮಾಡಿಲ್ಲ.. ನಾನು ಮಾಡಿದ್ದರೆ ದಾಖಲೆ ನೀಡುತ್ತಿದ್ದೆ. ಬಾಡಿಗೆ ಭಾಷಣಕಾರರ ಬಗ್ಗೆಯಾಗಲಿ ಅವರ ಬಾಸ್​ಗಳ  ಬಗ್ಗೆಯಾಗಲೀ ನಾನೇನು ಉತ್ತರಿಸಲಿ..? ನಾನು ಯಾವುದಾದರೂ ಎಫ್ಐಆರ್ ಹಾಕಿದ್ದರೆ ತೋರಿಸಲಿ. ಯಾರೋ ಒಬ್ಬರು ಅಲ್ಲಿನ ಸ್ಥಳೀಯ ನಾಯಕರು ಹಾಕಿದ್ದರೆ ಅದಕ್ಕೆ‌ ನಾನೇನು ಹೇಳಲಿ..? ಅವಹೇಳನಕಾರಿಯಾಗಿ ಮಾತನಾಡುವುದು ಬಿಜೆಪಿಯವರ ಚಾಳಿ ನನ್ನ ಬಗ್ಗೆ ಸದನದಲ್ಲೇ‌ ಬಿಜೆಪಿಯವರು ಅವಹೇಳನ‌ ರೀತಿಯಲ್ಲಿ ಮಾತನಾಡಿದ್ದಾರೆ. ನನ್ನ ಬಗ್ಗೆ ಪ್ರಸ್ತಾಪ ಮಾಡಲಿಲ್ಲ ಅಂದರೆ ಅವರಿಗೆ ಆರ್​ಎಸ್​ಎಸ್​ ನಲ್ಲಿ ಬೆಲೆ‌ಯೇ ಇರುವುದಿಲ್ಲ. ಬಿಜೆಪಿ ನಾಯಕರು ಬಹಿರಂಗ ವೇದಿಕೆಗೆ ಚರ್ಚೆಗೆ ಬರಲಿ ನಾನೊಬ್ಬನೇ ಸಾಕು ಅವರಿಗೆ ಉತ್ತರಿಸಲು ಎಂದು ಕಿಡಿಕಾರಿದ್ರು.

ದಲಿತರಿಗೆ ಮೀಸಲಿಟ್ಟ ಅನುದಾನ ದುರ್ಬಳಕೆ ಎನ್ನುವ ಬಿಜೆಪಿ ನಾಯಕರ ಹೇಳಿಕೆಗೆ ಸಚಿವ ಪ್ರಿಯಾಂಕ್​ ಖರ್ಗೆ ತಿರುಗೇಟು ನೀಡಿದ್ದಾರೆ. ದಲಿತರಿಗೆ ಮೀಸಲಿಟ್ಟ ಅನುದಾನ ಡೈವೋರ್ಟ್ ಆಗಿದ್ದರೆ ಬಿಜೆಪಿ ದಾಖಲೆ ನೀಡಲಿ. ಬಿಜೆಪಿ ನಾಯಕರು ಸುಮ್ಮನೆ ಆರೋಪ ಮಾಡುವುದು ಬಿಟ್ಟು ದಾಖಲೆ ಒದಗಿಸಲಿ SCP /TSP ಅನುದಾನ ಡೈವರ್ಟ್ ಅಗಿದ್ದು ಬಿಜೆಪಿ ಕಾಲದಲ್ಲಿ ಅದನ್ನು ಅಂದಿನ‌ ಸಿಎಂ‌ ಬೊಮ್ಮಾಯಿ‌ ಅವರೇ ಸ್ವತಃ ಒಪ್ಪಿಕೊಂಡಿದ್ದರು. ಈಗ ಅದೇ ಬಿಜೆಪಿ‌ ನಾಯಕರು ತಪ್ಪು ಮಾಹಿತಿ ಕೊಡುತ್ತಿದ್ದಾರೆ. ದಲಿತರ ಬಗ್ಗೆ ಆದಿವಾಸಿಗಳ ಬಗ್ಗೆ ನಿಜವಾದ ಕಾಳಜಿ‌ ಇದ್ದರೆ ಬಿಜೆಪಿ ನಾಯಕರು ಕೇಂದ್ರದಿಂದ ಅನುದಾನ ತರಿಸಿ‌ಕೊಡಲಿ ಎಂದು ಕಿಡಿಕಾರಿದ್ರು.

ಇನ್ನು ಯೂರಿಯಾ ಗೊಬ್ಬರ ಕೊರತೆ ಬಗ್ಗೆ ಪ್ರತಿಕ್ರಿಯಿಸದ ಅವರು ಕೇಂದ್ರ ಸರ್ಕಾರದ ಬಗ್ಗೆ ಬೊಟ್ಟು ಮಾಡಿದ್ದಾರೆ. ಕೇಂದ್ರ ಸರ್ಕಾರ ಈ ಸಲ ನಮಗೆ ಅಗತ್ಯವಿರುವ ಗೊಬ್ಬರ ಸರಬರಾಜು ಮಾಡಿಲ್ಲ. ರಾಜ್ಯದ ಓಪಿನಿಂಗ್ ಬ್ಯಾಲೆನ್ಸ್​ನ್ನು ಬೇಡಿಕೆಯಲ್ಲಿ ಕಡಿತಗೊಳಿಸಿ ಕೇಂದ್ರ ಸರ್ಕಾರ ಉಳಿದ ರಸಗೊಬ್ಬರ ಸರಬರಾಜು‌ ಮಾಡಿದೆ.ಈ ಹಿಂದೆ ರಾಜ್ಯದ ಓಪಿನಿಂಗ್ ಬ್ಯಾಲೆನ್ಸ್ ನ್ನು‌ ಪರಿಗಣಿಸುತ್ತಿರಲಿಲ್ಲ. ಇದೇ ಮೊದಲ ಬಾರಿಗೆ ಹೀಗೆ ಮಾಡಿರುವ ಕಾರಣ ಸಮಸ್ಯೆಯಾಗುತ್ತಿದೆ. ಕಲಬುರಗಿ ಜಿಲ್ಲೆಯಲ್ಲಿ ಈ ಸಲ 100% ಬಿತ್ತನೆಯಾಗಿದೆ. ರಸಗೊಬ್ಬರ ವಿಚಾರದಲ್ಲಿ ಬಿಜೆಪಿಯವರು ಇಲ್ಲಿ ಪ್ರತಿಭಟನೆ ಮಾಡುವ ಬದಲು ದಿಲ್ಲಿಯಲ್ಲಿ ಪ್ರತಿಭಟನೆ ಮಾಡಲಿ. ದಿಲ್ಲಿಯಲ್ಲಿ ಪ್ರತಿಭಟನೆ ಮಾಡಿ ರಾಜ್ಯಕ್ಕೆ ಅಗತ್ಯವಾದ ಗೊಬ್ಬರ ತರಿಸಿಕೊಡಲಿ ಎಂದು ಗುಡುಗಿದ್ರು.

ಸಿಎಂ ಸ್ಥಾನ ಕೈ ತಪ್ಪಿದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಬೇಸರ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು  ಸಿಎಂ ಗಾದಿ ತಪ್ಪಿದ್ದಕ್ಕೆ ಬೇಸರ ಇಲ್ಲ. ಸಂಪೂರ್ಣ ವಿಡಿಯೋ ನೋಡಿದಾಗ ಮಾತ್ರ ಅವರ ಮಾತಿನ ಅರ್ಥ ಆಗುತ್ತದೆ. ಪಕ್ಷಕ್ಕಾಗಿ ಅವರು ದುಡಿದಿದ್ದಾರೆ. ಇಲ್ಲಿಂದ ದಿಲ್ಲಿಯವರೆಗೆ ಅವರು ಮುಟ್ಟಿದ್ದಾರೆ. ಸಿಎಂ ಪದವಿ ತಪ್ಪಿರುವ ಬಗ್ಗೆ ಅವರಿಗೆ ಯಾವುದೇ ಬೇಸರ ಇಲ್ಲ. ಅವರ ಮುಂದಿನ ರಾಜಕೀಯ ಜೀವನದ ನಿರ್ಧಾರಗಳನ್ನು ಅವರು ತೆಗೆದುಕೊಳ್ಳುತ್ತಾರೆ. ಅವರ ನಿರ್ಧಾರವನ್ನು ಸೋನಿಯಾಗಾಂಧಿ, ರಾಹುಲ್ ಗಾಂಧಿ‌ ಹಾಗೂ ಪ್ರಿಯಾಂಕಾ ಗಾಂಧಿ ಕೂಡಾ ಗೌರವಿಸುತ್ತಾರೆ ಎಂದ್ರು.

ಇನ್ನು ಚುನಾವಣೆಯಲ್ಲಿ ಅಕ್ರಮದ ಬಗ್ಗೆ ಮಾತನಾಡಿದ ಅವರು ಬಿಜೆಪಿ ಪಕ್ಷ ಚುನಾವಣೆ ಆಯೋಗವನ್ನು ತಮ್ಮ‌‌ ಕೈಗೊಂಬೆಯನ್ನಾಗಿ ಮಾಡಿಕೊಂಡಿದೆ. ಕರ್ನಾಟಕ, ಮಹಾರಾಷ್ಟ್ರ ಚುನಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ರಾಹುಲ್ ಗಾಂಧಿ ಈಗಾಗಲೇ ಹೇಳಿದ್ದಾರೆ ಎಂದ್ರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments