ಕಾರವಾರ : ಕಾಂಗ್ರೆಸ್ ನಾಯಕರು ಎಲ್ಲರೂ ನನ್ನ ಮುಂದೆ ಬಂದು ಸಂಸ್ಕೃತಿ ಬಗ್ಗೆ ಚರ್ಚೆ ಮಾಡಲಿ. ಸಭ್ಯತೆ ಅಂದರೇ ಏನು ಅಂತ ನಾನು ಪಾಠ ಮಾಡುತ್ತೇನೆ. ಎಂದು ಮತ್ತೆ ಕಾಂಗ್ರೆಸ್ ನಾಯಕರ ವಿರುದ್ಧ ಅನಂತ ಕುಮಾರ್ ಹೆಗಡೆ ಕೆಂಡಕಾರಿದ್ದಾರೆ….ಸಂಸ್ಕೃತಿ ಬಗ್ಗೆ ಸಿದ್ದರಾಮಯ್ಯ ನನ್ನ ಎದುರು ಬಂದು ಮಾತನಾಡಲಿ. ಏನೂ ಮಾತನಾಡಬೇಕು ಅಂತ ನಾನು ಹೇಳುತ್ತೇನೆ. ಯಾರಿಗೆ ಯಾವ ಭಾಷೆಯಲ್ಲಿ ಹೇಗೆ ಮಾತಾಡಬೇಕು ಹಾಗೆ ಮಾತಾಡಬೇಕು. ಸಭ್ಯತೆ ಅಂದರೇ ಏನು ಎಂಬುವುದನ್ನು ಮೊದಲು ನೀವು ತಿಳಿದುಕೊಳ್ಳಿ ಎಂದು ಉತ್ತರ ಕನ್ನಡ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದರು.
ಶಿರಸಿಯ ನಿವಾಸದಲ್ಲಿ ಮಾತನಾಡಿದ ಹೆಗಡೆ ,ಸಿದ್ದರಾಮಯ್ಯ ಕಳೆದ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರಿಗೆ ಏಕವಚನದಲ್ಲಿ ಮಾಸ್ ಮರ್ಡರ್ ಎಂದು ಕರೆದರು. ಅವರಿಗೊಂದು ನ್ಯಾಯ ನಮಗೊಂದು ನ್ಯಾಯನಾ..? ಅದೆಲ್ಲ ನಮಗೆ ಗೊತ್ತಿಲ್ಲ ಯಾರಿಗೆ ಹೇಗೆ ಮಾತಾಡಬೇಕು ನಮಗೆ ಗೊತ್ತು. ಇದರ ಎಲ್ಲದರ ಬಗ್ಗೆ ಜನರ ಮುಂದೆ ಚರ್ಚೆ ಮಾಡೋಣ. ಎಲ್ಲೊ ಕೂತುಕೊಂಡು ಸಭೆಯಲ್ಲಿ ಮಾತನಾಡುವುದು ಸರಿ ಅಲ್ಲ ಎಂದರು.
ಇನ್ನು ಹಾಗೆಯೇ ಡಿಸಿಎಂ ಡಿಕೆಶಿ ಹೇಳಿಕೆಗೂ ಅನಂತ ಕುಮಾರ್ ಹೆಗಡೆಯವರು ಟಾಂಗ್ ಕೊಟ್ಟಿದ್ದಾರೆ..ಆರೋಗ್ಯ ಸರಿ ನೋಡಿಕೊಳ್ಳಿ ಎಂಬ ಡಿಕೆ ಶಿವಕುಮಾರ ಹೇಳಿಕೆ ವಿಚಾರವಾಗಿ ಮಾತನಾಡಿ, ನನ್ನ ಆರೋಗ್ಯ ಅತ್ಯಂತ ಚೆನ್ನಾಗಿದೆ. ಆರೋಗ್ಯದಲ್ಲಿ ಯಾವುದೆ ಸಂಶಯ ಇಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತೆ. ಗೆಲ್ಲಿಸುತ್ತೇನೆ. ನನ್ನ ಟಿಕೆಟ್ ಬಗ್ಗೆ ಬೇರೇಯವರಿಗೆ ಯಾಕೆ ಚಿಂತೆ. ನನ್ನ ಟಿಕೆಟ್ ಬಗ್ಗೆ ನನಗೆ ಚಿಂತೆ ಆಗಬೇಕು ಎಂದರು.