#Exclusive NewsTop Newsದೇಶ/ವಿದೇಶಸುದ್ದಿ

ಆರೋಗ್ಯ ಸಮಸ್ಯೆಯಿಂದ ಎಲ್​.ಕೆ.ಅಡ್ವಾಣಿ ಆಸ್ಪತ್ರೆಗೆ ದಾಖಲು….!

ನವದೆಹಲಿ : ಭಾರತದ ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಅನಾರೋಗ್ಯಕ್ಕೆ ತುತ್ತಾದರು. ಶನಿವಾರ ಬೆಳಗ್ಗೆ ಅಡ್ವಾಣಿ ಅವರನ್ನು ಅವರ ಕುಟುಂಬ ಸದಸ್ಯರು ಅಪೋಲೋ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ. ಅಡ್ವಾಣಿ ಅವರಿಗೆ ಪ್ರಸ್ತುತ 97 ವರ್ಷ. ವಯೋಸಹಜವಾಗಿ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಎರಡು ತಿಂಗಳ ಹಿಂದೆ ಆರೋಗ್ಯ ಸಮಸ್ಯೆಯಿಂದ ಅಡ್ವಾಣಿ ಆಸ್ಪತ್ರೆಗೆ ದಾಖಲಾಗಿದ್ದರು. ದೆಹಲಿಯ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಏತನ್ಮಧ್ಯೆ, ಅಡ್ವಾಣಿ ಅಸ್ವಸ್ಥರಾಗಿದ್ದಾರೆ ಎಂಬ ಸುದ್ದಿ ತಿಳಿದು ಬಿಜೆಪಿ ಮತ್ತು ಅವರ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Comments (0)

Your email address will not be published. Required fields are marked *

Back to top button