ಜಿಲ್ಲೆರಾಜಕೀಯ

ಎಲ್‌ಕೆ ಅಡ್ವಾಣಿಗೆ ಭಾರತ ರತ್ನ, ಪ್ರಧಾನಿ ಮೋದಿ ಘೋಷಣೆ!

ನವದೆಹಲಿ : ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಣೆ ಮಾಡಿದ್ದಾರೆ.
ಎಲ್​​ಕೆ ಅಡ್ವಾಣಿ ಜೀ ಅವರಿಗೆ ಭಾರತ ರತ್ನ ನೀಡುವುದರ ಬಗ್ಗೆ ಮಾಹಿತಿ ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಅವರು ಒಬ್ಬರು. ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮರಣಾರ್ಹ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಜೀವನ ಅವರದು ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.

 

Comments (0)

Your email address will not be published. Required fields are marked *

Back to top button