ಬೆಂಗಳೂರು ನಗರದಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ವಿಚಾರಕ್ಕೆ ಸಂಬಂಧಿಸಿದಂತೆ ಇನ್ನೊಂದು ವಾರದಲ್ಲಿ ಸ್ಥಳ ನಿಗದಿ ಮಾಡಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಶುಕ್ರವಾರ ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಸಚಿವರು, ಅಧಿಕಾರಿಗಳ ಜತೆ ಮತ್ತೊಂದು ಸುತ್ತಿನ ಸಭೆಯ ಬಳಿಕ ಸ್ಥಳ ಅಂತಿಮಗೊಳಿಸಲಾಗುವುದು. ಜಾಗತಿಕ ಮಟ್ಟದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಸಾರ್ವಜನಿಕರು ಮತ್ತು ಉದ್ಯಮಗಳಿಗೆ ಇನ್ನೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ ಎಂದು ತಿಳಿಸಿದರು. ವಿಮಾನ ನಿಲ್ದಾಣಕ್ಕಾಗಿ ಸರ್ಕಾರವು ಐದು ಸ್ಥಳಗಳನ್ನು ಗುರುತಿಸಿದೆ. ಆದರೆ ಇವುಗಳ ಪೈಕಿ ಯಾವುದನ್ನೂ ಅಂತಿಮಗೊಳಿಸಿಲ್ಲ. ಈ ಸಂಬಂಧ ಇನ್ನೊಂದು ವಾರದಲ್ಲಿ ಸಭೆ ಸೇರಿ, ಅಂತಿಮ ನಿರ್ಧಾರಕ್ಕೆ ಬರುತ್ತೇವೆ ಎಂದು ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು. ಎರಡನೇಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳವನ್ನು ಈಗಾಗಲೇ ತೀರ್ಮಾನಿಸಲಾಗಿದೆ ಎನ್ನುವ ವರದಿಗಳಿಗೆ ಆಧಾರವಿಲ್ಲ. ಬಸಪೇಟೆ, ನೆಲಮಂಗಲ, ಬಿಡದಿ, ಹಾರೋಹಳ್ಳಿ ಸೇರಿದಂತೆ ಒಟ್ಟು ಐದು ಸ್ಥಳಗಳನ್ನು ಮುಕ್ತವಾಗಿಟ್ಟುಕೊಂಡಿದ್ದೇವೆ ಎಂದರು. ವಿಮಾನ ನಿಲ್ದಾಣಕ್ಕೆ ಸ್ಥಳ ಆಯ್ಕೆ ಮಾಡುವಲ್ಲಿ ಯಾರಿಗೂ ರಾಜಕೀಯ ಹಿತಾಸಕ್ತಿ ಇಲ್ಲ. ಬೆಂಗಳೂರಿನ ಜನತೆಗೆ ಮತ್ತು ಉದ್ಯಮಿಗಳ ಅನುಕೂಲವಷ್ಟೇ ಇಲ್ಲಿ ಮುಖ್ಯವಾಗಿದೆ. ಇದರಿಂದ ಆರ್ಥಿಕ ಬೆಳವಣಿಗೆಗೆ ಒಳ್ಳೆಯ ಕೊಡುಗೆ ಬರಬೇಕು. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವು ದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
2ನೇ ವಿಮಾನ ನಿಲ್ದಾಣಕ್ಕೆ ಸ್ಥಳ ಇನ್ನೊಂದು ವಾರದಲ್ಲಿ ಅಂತಿಮ: ಎಂಬಿಪಾ
RELATED ARTICLES