ಬೆಂಗಳೂರು: ದೇಶಾದ್ಯಂತ ಲೋಕಸಭಾ ಚುನಾವಣಾ ಕಾವು ಜೋರಾಗತೊಡಗಿದೆ. ಪ್ರಧಾನಿ ಮೋದಿ ನೇತೃತ್ವದ ಎನ್ಡಿಎ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿಯಲು ಹವಣಿಸುತ್ತಿದೆ. ಈ ನಿಮಿತ್ತ ಮೋದಿ ಮತ್ತೊಮ್ಮೆ ಅಂತ ಕೇಸರಿ ಕಲಿಗಳು ಈಗಾಗಲೇ ಪ್ರಚಾರದ ಅಖಾಡಕ್ಕಿಳಿದಿದ್ದಾರೆ.
ರಾಜ್ಯಸಭೆ ಚುನಾವಣೆಗೆ ಪಕ್ಷವು 5ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಎಲ್ಲರೂ ಮತದಾನ ಮಾಡಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಬುಧವಾರ ರಾತ್ರಿ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯಸಭೆ ಚುನಾವಣೆ, ಗ್ಯಾರಂಟಿ ಅನುಷ್ಠಾನ, ಲೋಕಸಭೆ ಚುನಾವಣೆ ಸಿದ್ಧತೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. ಮುಖ್ಯವಾಗಿ ಸಿಎಲ್ಪಿ ಸಭೆಯಲ್ಲಿ 3 ಪ್ರಮುಖ ವಿಚಾರಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು..
ಇನ್ನು ಲೋಕಸಭೆ ಹಾಗೂ ರಾಜ್ಯಸಭೆ ಟಿಕೆಟ್ ಹಂಚಿಕೆ ವಿಚಾರವಾಗಿ ಮತ್ತೊಂದು ಸುತ್ತಿನ ಸಭೆ ಅಗತ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಅಭಿಪ್ರಾಯಪಟ್ಟಿದ್ದಾರೆ.
ಶಾಸಕರಿಗೆ ‘ಲೋಕ’ ಪಾಠ
ಲೋಕಸಭಾ ಚುನಾವಣೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಿ
ಸದನ ಮುಗಿಯುತ್ತಿದ್ದಂತೆ ಕ್ಷೇತ್ರದಲ್ಲಿ ವಾಸ್ತವ್ಯ ಹೂಡಿ
ಬೆಂಗಳೂರಿಗೆ ಬರಬೇಡಿ, ಜನರನ್ನ ವಿಶ್ವಾಸಕ್ಕೆ ತಗೊಳ್ಳಿ
ಮುಖಂಡರು,ಕಾರ್ಯಕರ್ತರ ಜೊತೆ ಸಂಪರ್ಕದಲ್ಲಿರಿ
ಸರ್ಕಾರದ ಗ್ಯಾರೆಂಟಿಗಳ ಬಗ್ಗೆ ಜನರಿಗೆ ತಿಳಿಸಿ ಕೊಡಿ
ನಿಮ್ಮ ಕ್ಷೇತ್ರದ ಅನುದಾನವನ್ನ ಬಿಡುಗಡೆ ಮಾಡ್ತೇವೆ
ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ಕೊಡಿ
ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಹೆಚ್ಚಿನ ಲೀಡ್ ತಂದು ಕೊಡಿ
ಪಕ್ಷದ ಅಭ್ಯರ್ಥಿಗಳನ್ನ ಗೆಲ್ಲಿಸಿ ಕೊಡುವತ್ತ ಗಮನಹರಿಸಿ


