ಬೆಂಗಳೂರು: ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶ ಬಹುತೇಕ ಹೊರಬಿದ್ದಿದ್ದು, ರಾಜ್ಯದಿಂದ ಸಂಸತ್ತಿಗೆ ಸ್ಪರ್ಧಿಸಿದ್ದ ಮೂರು ಮಾಜಿ ಸಿಎಂಗಳಿಗೆ ಗೆಲುವು ಸಿಕ್ಕಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಎಚ್‌ಡಿ ಕುಮಾರಸ್ವಾಮಿ, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಜಗದೀಶ್‌ ಶೆಟ್ಟರ್‌ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣಕ್ಕೆ

ಸದ್ಯ ಈ ಮೂವರು ನಾಯಕರು ರಾಜ್ಯ ರಾಜಕಾರಣಕ್ಕೆ ಸೀಮಿತವಾಗಿದ್ದರು. ಇನ್ನು ಮುಂದೆ ಸಂಸದರಾಗಿ ರಾಷ್ಟ್ರ ಮಟ್ಟದ ರಾಜಕೀಯಲ್ಲಿ ತೊಡಗಿಕೊಳ್ಳಲಿದ್ದಾರೆ.

ತ್ರಿ ಗೆಲುವಿಗೆ ಪಣತೊಟ್ಟು ಸ್ಪರ್ಧೆ ಮಾಡಿದ್ದ ಮಾಜಿ ಸಿಎಂಗಳು

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡಿತ್ತು. ಸದ್ಯ ಮೈತ್ರಿಯನ್ನು ಗೆಲ್ಲಿಸಬೇಕು ಎಂದು ಎಚ್‌ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಹಾಗೂ ಜಗದೀಶ್‌ ಶೆಟ್ಟರ್‌ ಪಣ ತೊಟ್ಟದ್ದರು. ಸದ್ಯ ತಮ್ಮ ಗೆಲುವಿನ ಮೂಲಕ ಮೈತ್ರಿ ಸ್ಥಾನ ಹೆಚ್ಚಿಸಲು ಕೊಡುಗೆ ನೀಡಿದ್ದಾರೆ

ಯಾರಿಗೆ ಎಷ್ಟು ಮತ ಅಂತರದ ಗೆಲುವು?

  • ಎಚ್‌ಡಿ ಕುಮಾರಸ್ವಾಮಿ ಮಂಡ್ಯದಲ್ಲಿ 2,82,056 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
  • ಬಸವರಾಜ ಬೊಮ್ಮಾಯಿ ಹಾವೇರಿಯಲ್ಲಿ 29,097 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
  • ಜಗದೀಶ್‌ ಶೆಟ್ಟರ್‌ ಬೆಳಗಾವಿಯಲ್ಲಿ 68792 ಮತಗಳ ಅಂತರದಲ್ಲಿ ಗೆದ್ದದ್ದಾರೆ.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

By admin

Leave a Reply

Your email address will not be published. Required fields are marked *

Verified by MonsterInsights