ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ.

ನವೆಂಬರ್‌ 6 ಬುಧವಾರ  10:30ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಲಾಗಿದೆ. ಈಗಾಗಲೇ ಪತ್ನಿ ಪಾರ್ವತಿ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದರು.

ಈಗಾಗಲೇ ಲೋಕಾಯುಕ್ತ ಎಲ್ಲಾ ಆರೋಪಿಗಳ ವಿಚಾರಣೆ ಮುಗಿಸಿದ್ದು, ಸಿದ್ದರಾಮಯ್ಯನವರ ವಿಚಾರಣೆಯೊಂದೇ ಬಾಕಿ ಇತ್ತು. ಇದೀಗ ಎ1 ಆರೋಪಿಗೂ ಸಹ ಲೋಕಾಯುಕ್ತ ವಿಚಾರಣೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ. ಸಿದ್ದರಾಮಯ್ಯ ಜೀವನದ ಮೊದಲ ವಿಚಾರಣೆ ಇದಾಗಿದೆ. ಅವರು ಸುಮಾರ 40 ವರ್ಷಗಳಿಂದ ರಾಜಕಾರಣದಲ್ಲಿದ್ದು, ಯಾವುದೇ ರೀತಿ ಪ್ರಕರಣದಲ್ಲಿ ಆರೋಪಿಯಾಗಿ ವಿಚಾರಣೆ ಎದುರಿಸಿರಲಿಲ್ಲ. ಆದ್ರೆ, ಇದೀಗ ಸಿದ್ದರಾಮಯ್ಯನವರಿಗೆ ಮುಡಾ ಕಂಟಕ ಎದುರಾಗಿದ್ದು, ತಮ್ಮ 40 ವರ್ಷ ಸುದೀರ್ಘ ರಾಜಕಾರಣದಲ್ಲಿ ಇದೇ ಮೊದಲ ಬಾರಿಗೆ ಲೋಕಾಯುಕ್ತದ ಮುಂದೆ ವಿಚಾರಣೆಗೆ ಹಾಜರಾಗಬೇಕಾದ ಅನಿವಾರ್ಯತೆ ಎದುರಾಗಿದೆ.

ಈಗಾಗಲೇ ಎ2 ಪಾರ್ವತಿ ಸಿದ್ದರಾಮಯ್ಯ, ಎ3 ಮಲ್ಲಿಕಾರ್ಜುನ ಹಾಗೂ ಎ4 ದೇವರಾಜು ಸೇರಿ ಹಲವರ ವಿಚಾರಣೆಯನ್ನು ಲೋಕಾಯುಕ್ತ ವಿಚಾರಣೆ ನಡೆಸಿದೆ.  ಇನ್ನು ಮುಡಾದ ಸೈಟ್​ ಬಗ್ಗೆಯೂ ಸಹ ಲೋಕಾಯುಕ್ತ ಮಹತ್ವದ ದಾಖಲೆಗಳನ್ನು ಕಲೆಹಾಕಿದೆ. ಅಲ್ಲದೇ ಸಿಎಂ ಕುಟುಂಬಕ್ಕೆ ಹಂಚಿಕೆಯಾಗಿದ್ದ ಸೈಟ್​ಗಳಿಗೂ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

By Veeresh

Leave a Reply

Your email address will not be published. Required fields are marked *

Verified by MonsterInsights