Top Newsಸುದ್ದಿಹಣಕಾಸು

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ..

ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿಗಳು ನಡೆದಿವೆ. ಬೀದರ್, ಬೆಳಗಾವಿ, ಧಾರವಾಡ, ಗದಗ, ದಾವಣಗೆರೆ ಮತ್ತು ಮೈಸೂರಿನ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆದಿದೆ.

ಲೋಕಾಯುಕ್ತ  ಅಧಿಕಾರಿಗಳು  ರಾಜ್ಯದ ಹಲವು ಜಿಲ್ಲೆಗಳಲ್ಲಿ  ದಾಳಿ ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಧಾರವಾಡದ ಮೂರು ಕಡೆ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಎರಡು, ಗದಗ ಜಿಲ್ಲೆ ನರಗುಂದದಲ್ಲಿ ಒಂದು, ಬೀದರ್​, ದಾವಣಗೆರೆ ಮತ್ತು ಮೈಸೂರಿನ  ಕಡೆ ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ .

ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ರವೀಂದ್ರ ರೊಟ್ಟೆ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸುತ್ತಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಹನುಮಂತ  ಅವರ ನೇತೃತ್ವದಲ್ಲಿ ದಾಳಿ ನಡೆದಿದೆ. ರವೀಂರ್ದ್ರ ರೊಟ್ಟೆ ಈ ಹಿಂದೆ ಬೀದರ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿರೆಸ್ತಾದಾರ ಹಾಗೂ ಬಿಬಿಎಂಪಿಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ್ ಡವಳೇಶ್ವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ವಿಠ್ಠಲ್ ಡವಳೇಶ್ವರ ಈ‌ ಹಿಂದೆ ಅಕ್ರಮವಾಗಿ 1.10 ಕೋಟಿ ಹಣವನ್ನು ಚಿಕ್ಕೋಡಿಯಿಂದ ಬಾಗಲಕೋಟೆಗೆ ಸಾಗಿಸುವಾಗ ಸಿಕ್ಕಿಬಿದ್ದಿದ್ದರು.

ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಮೈಸೂರು ನಗರ ಪಾಲಿಕೆ  ವಲಯದ  ಆಯುಕ್ತ ನಾಗೇಶ್ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನು, ಶ್ರೀರಂಗಪಟ್ಟಣದಲ್ಲಿರುವ ನಾಗೇಶ್​ನ ಮತ್ತೊಂದು ಮನೆ ಮೇಲೂ ಲೋಕಾಯುಕ್ತ ರೇಡ್ ಮಾಡಿದ್ದಾರೆ . ನಾಗೇಶ್ ಹಿಂದೆ ಶ್ರೀರಂಗಪಟ್ಟಣ ತಹಶೀಲ್ದಾರ್ ಆಗಿದ್ದರು.

ಧಾರವಾಡದ ಗಾಂಧಿನಗರ ಬಡಾವಣೆಯಲ್ಲಿರುವ ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.  ಗೋವಿಂದಪ್ಪ ಭಜಂತ್ರಿಗೆ ಸೇರಿದ ಸವದತ್ತಿ ತಾಲೂಕಿನ ಹೂಲಿ, ಉಗರಗೋಳ ಫಾರ್ಮ್​ಹೌಸ್ ಧಾರವಾಡದ ತೇಜಸ್ವಿನಗರ ಬಡಾವಣೆಯ ಅಳಿಯನ ಮನೆ, ಲಕ್ಕಮನಹಳ್ಳಿ ಬಡಾವಣೆ ಕೆಐಎಡಿಬಿ ಕಚೇರಿ ಮೇಲೂ ದಾಳಿ ಮಾಡಿದ್ದಾರೆ. ಹಾಗೇ ನರಗುಂದದಲ್ಲಿರುವ ಸಹೋದರನ ಮನೆ ಮೇಲೂ ಡಿವೈಎಸ್​ಪಿ ವೆಂಕನಗೌಡ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆದಿದೆ.

ದಾವಣಗೆರೆಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಸಹಾಯ ನಿರ್ದೇಶಕ ಕಮಲ್ ರಾಜ್ ಮನೆಯ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ.ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತ್ರತ್ವದಲ್ಲಿ ಇನ್ಸ್ ಪೆಕ್ಟರ್​ಗಳಾದ ಮಧುಸೂದನ್ ಹಾಗೂ ಪ್ರಭು ಸೇರಿದಂತೆ ಹತ್ತಕ್ಕೂ ಹೆಚ್ಚು ಸಿಬ್ಬಂದಿಗಳಿಂದ ದಾಳಿ ನಡೆಸಿದ್ದಾರೆ.

Comments (0)

Your email address will not be published. Required fields are marked *

Back to top button