ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದಡಿ ರಾಜ್ಯದ ಹಲವೆಡೆ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದೆ.
ಹಾಸನದಲ್ಲಿ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಹೆಲ್ತ್ ಇನ್‌ಸ್ಪೆಕ್ಟರ್ ಜಗನ್ನಾಥ್ ನಿವಾಸದ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ತಿರುಮಲೇಶ್, ಇನ್‌ಸ್ಪೆಕ್ಟರ್‌ಗಳಾದ ಬಾಲು, ಶಿಲ್ಪಾ ನೇತೃತ್ವದ ತಂಡ ದಾಳಿ ನಡೆಸಿದೆ. ಜಗನ್ನಾಥ್ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ನಿವಾಸ ಹಾಗೂ ಕಚೇರಿ ಮೇಲೂ ದಾಳಿ ಪರಿಶೀಲನೆ ನಡೆಸಲಾಗುತ್ತಿದೆ.
ಚಿಕ್ಕಮಗಳೂರಿನಲ್ಲಿ ಕಡೂರು ಪಟ್ಟಣದಲ್ಲಿರುವ ವಾಣಿಜ್ಯ ಅಧಿಕಾರಿ ನೇತ್ರಾವತಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ನೇತ್ರಾವತಿ ಅವರು ತರೀಕೆರೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿದ್ದಾರೆ. 13 ವರ್ಷದಿಂದ ಅಧಿಕ ಆಸ್ತಿ ಹೊಂದಿರುವ ಆರೋಪ ಹೊತ್ತಿದ್ದಾರೆ. ಲೋಕಾಯುಕ್ತ ಇನ್‌ಸ್ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಇತ್ತ ಮಂಡ್ಯದಲ್ಲಿ PWD ಇಲಾಖೆ EE ಹರ್ಷ ಎಂಬವರ ಮನೆ, ಕಚೇರಿ, ಕುಟುಂಬಸ್ಥರು, ಸಂಬಂಧಿಕರ ಮನೆ ಮೇಲೂ ಲೋಕ ದಾಳಿ ಮಾಡಿದೆ. ಇವರ ಮನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿದೆ. ಮಂಡ್ಯದ ಕಚೇರಿ, ಮಾವನ ಮನೆ, ನಾಗಮಂಗಲದಲ್ಲಿರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಲಾಗಿದೆ. ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ಆರು ಕಡೆ ದಾಳಿ ಮಾಡಿದ್ದಾರೆ.
ಇನ್ನು ವಿಜಯನಗರದಲ್ಲೂ ಜೆಸ್ಕಾಂ ಇಲಾಖೆಯ AEE ಭಾಸ್ಕರ್ ಮನೆ ಮೇಲೆ ದಾಳಿ ಮಾಡಿದ್ದಾರೆ.ಹೊಸಪೇಟೆ, ಕೊಪ್ಪಳದ ಗಿಣಗೇರಾ ದಲ್ಲಿರೋ ಭಾಸ್ಕರ್ ನಿವಾಸದ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ..ಹೊಸಪೇಟೆ ಲೋಕಾಯುಕ್ತ ಪಿಐ ರಾಜೇಶ್ ಲಮಾಣಿ, ಸುರೇಶ್ ನೇತೃತ್ವದಲ್ಲಿ ದಾಳಿ
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಎಂಜಿನಿಯರ್ ಹನುಮಂತರಾಯಪ್ಪ, ಮಂಡ್ಯ ಲೋಕೋಪಯೋಗಿ ಇಲಾಖೆ ವಿಭಾಗದ ಎಂಜಿನಿಯರ್ ಹರ್ಷ, ಚಿಕ್ಕಮಗಳೂರಿನ ವಾಜಿಜ್ಯ ತೆರಿಗೆ ಅಧಿಕಾರಿ ನೇತ್ರವಾತಿ, ಹಾಸನದ ಆಹಾರ ನಿರೀಕ್ಷಕ ಜಗನ್ನಾಥ್, ಕೊಪ್ಪಳ ಅರಣ್ಯ ಇಲಾಖೆ ಅಧಿಕಾರಿ ರೇಣುಕಾಮ್ಮ, ಚಾಮರಾಜನಗರ ಗ್ರಾಮೀಣ ನೀರು ಪೂರೈಕೆ ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ರವಿ, ವಿಜಯನಗರ ಜಿಲ್ಲೆಯ ಇಂಧನ ಇಲಾಖೆ ಅಧಿಕಾರಿ ಭಾಸ್ಕರ್, ಮಂಗಳೂರಿನ ಮೆಸ್ಕಾ ಅಧಿಕಾರಿ ಶಾಂತಕುಮಾರ್
ಇನ್ನು ರಾಜ್ಯದ ವಿವಿಧ ಜಿಲ್ಲೆಗಳ ಲೋಕಾಯುಕ್ತ ಪೊಲೀಸರನ್ನು ಒಳಗೊಂಡು 40 ತಂಡಗಳು ಕಾರ್ಯಾಚರಣೆಯಲ್ಲಿ ಭಾಗಿ