ಷೇರು ಮಾರುಕಟ್ಟೆಯಲ್ಲಿ ಲಾಸ್ – ಒಂದೇ ಕುಟುಂಬದ ನಾಲ್ವರು ನಾಪತ್ತೆ!
Loss in stock market – four members of the same family go missing!

ದಾವಣಗೆರೆ : ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ ಅನುಭವಿಸಿದ್ದರಿಂದ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ.
ದಂಪತಿ ಹಾಗೂ ಮಕ್ಕಳಿಬ್ಬರು ಸೇರಿದಂತೆ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದಾರೆ. ದಾವಣಗೆರೆಯ ಬನಶಂಕರಿ ಬಡಾವಣೆಯ ನಿವಾಸಿಗಳಾದ ರಮೇಶ್ ಕುಮಾರ್ (38), ಇವರ ಪತ್ನಿ ಜಯಶೀಲ (36), ಪುತ್ರ ಹಿತೇಶ್ (9) ಮತ್ತು ಪುತ್ರಿ ಪ್ರೇರಣಾ (3) ನಾಪತ್ತೆಯಾದವರು. ಮೂಲತಃ ದಾವಣಗೆರೆ ತಾಲೂಕಿನ ಶ್ಯಾಗಲೆ ಗ್ರಾಮದವರಾದ ಈ ಕುಟುಂಬ ಬನಶಂಕರಿ ಬಡಾವಣೆಯಲ್ಲಿ ವಾಸವಿತ್ತು.
ರಮೇಶ್ ಕುಮಾರ್ ಅವರು ಇತ್ತೀಚೆಗೆ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಭಾರಿ ನಷ್ಟ ಅನುಭವಿಸಿದ್ದರು. ಬೆಂಗಳೂರಿಗೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ ತೆರಳಿದ್ದ ನಾಲ್ವರೂ ಸದಸ್ಯರು ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ. ಕುಟುಂಬದವರ ಸುಳಿವು ಸಿಗದೆ ಇರುವುದರಿಂದ ಗಾಬರಿಗೊಂಡ ಮನೆಯವರು ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಾಪತ್ತೆಯಾಗಿರುವ ನಾಲ್ವರೂ ಸದಸ್ಯರ ಮೊಬೈಲ್ ಫೋನ್‌ಗಳು ಸ್ವಿಚ್‌ಆಫ್ ಬರುತ್ತಿವೆ. ಇದರಿಂದ ಅವರ ಇರುವಿಕೆಯ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ.




