Wednesday, January 28, 2026
20.2 C
Bengaluru
Google search engine
LIVE
ಮನೆ#Exclusive Newsಪ್ರೇಯಸಿ ಮನೆ ಮುಂದೆಯೇ ಸ್ಫೋಟಿಸಿಕೊಂಡು ಪ್ರಿಯಕರ ಆತ್ಮಹತ್ಯೆ

ಪ್ರೇಯಸಿ ಮನೆ ಮುಂದೆಯೇ ಸ್ಫೋಟಿಸಿಕೊಂಡು ಪ್ರಿಯಕರ ಆತ್ಮಹತ್ಯೆ

   ಮಂಡ್ಯ: ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಗ್ರಾಮವೊಂದರಲ್ಲಿ‌ ನಿನ್ನೆ(ಶನಿವಾರ) ನಡೆದಿದೆ. ರಾಮಚಂದ್ರು (21) ಎಂಬಾತನೇ ಆತ್ಮಹತ್ಯೆಗೆ ಶರಣಾದ ಯುವಕ. ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ರಾಮಚಂದ್ರು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಿಲೆಟಿನ್ ಸ್ಫೋಟಕ್ಕೆ ಯುವಕನ ಹೊಟ್ಟೆಯ ಭಾಗ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಒಂದು ವರ್ಷದ ಹಿಂದೆ ಅಪ್ರಾಪ್ತೆ ಕರೆದೊಯ್ದ ಹಿನ್ನೆಲೆಯಲ್ಲಿ ರಾಮಚಂದ್ರು ವಿರುದ್ಧ ಫೋಕ್ಸೋ ಕೇಸ್ ದಾಖಲಾಗಿತ್ತು. ಫೋಕ್ಸೋ ಕೇಸ್‌ನಲ್ಲಿ 6 ತಿಂಗಳು ಜೈಲುವಾಸ ಅನುಭವಿಸಿದ್ದ. ಬಳಿಕ 2 ಕುಟುಂಬಗಳ ರಾಜಿ ಸಂಧಾನ ಬಳಿಕ ಕೇಸ್ ವಾಪಾಸ್ ಪಡೆಯಲಾಗಿತ್ತು. ನಂತರ ಅಪ್ರಾಪ್ತ ಪ್ರಿಯತಮೆ ರಾಮಚಂದ್ರನ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಹೀಗಾಗಿ ಮನನೊಂದ ರಾಮಚಂದ್ರ ನಿನ್ನೆ ಆಕೆಯ ಮುನೆಯ ಮುಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಲ್ಲುಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಪೋಟಿಸಿಕೊಂಡು ಸೂಸೈಡ್‌ ಮಾಡಿಕೊಂಡಿದ್ದು, ಸ್ಪೋಟಕದ ಬಗ್ಗೆ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ.

ಪ್ರಕರಣದ ಬಗ್ಗೆ ಮಂಡ್ಯ ಎಸ್ ಪಿ ಹೇಳಿದ್ದೇನು?

ಇನ್ನು ಈ ಪ್ರಕರಣದ ಬಗ್ಗೆ ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಯುವಕ ಜಿಲೆಟಿನ್ ಸ್ಟೋಟಿಸಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ಈ ಹಿಂದೆ ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಅಪ್ರಾಪ್ತಯನ್ನೆ ಮನೆಯಿಂದ ಕರೆದುಕೊಂಡು ಹೋಗಿದ್ದ. ಈ ಸಂಬಂಧ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂರು ತಿಂಗಳು ಜೈಲಿನಲ್ಲಿ ಇದ್ದು ಬಂದಿದ್ದಾನೆ. ಆನಂತರ ಕುಟುಂಬಸ್ಥರು ರಾಜೀ ಮಾಡಿಕೊಂಡಿಕೊಂಡಿದ್ದರು . ಮೃತ ಯುವಕ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ಸಹ ಸ್ನೇಹಿತರ ಜೊತೆ ಮದ್ಯಸೇವನೆ ಕೂಡ ಮಾಡಿದ್ದ. ಸ್ಟೋಟಕ ಎಲ್ಲಿ ಸಿಕ್ಕಿದೆ ಎಂಬ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಸ್ಪೋಟಕ ನೀಡಿದವರ ವಿರುದ್ಧ ಕೂಡ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments