Wednesday, January 28, 2026
27.9 C
Bengaluru
Google search engine
LIVE
ಮನೆ#Exclusive NewsLS Polls: ಕಟೀಲ್​ಗೆ ಬಿಗ್ ಶಾಕ್..- ಸತ್ಯಜಿತ್ ಸುರತ್ಕಲ್​ಗೆ ಲಕ್​?

LS Polls: ಕಟೀಲ್​ಗೆ ಬಿಗ್ ಶಾಕ್..- ಸತ್ಯಜಿತ್ ಸುರತ್ಕಲ್​ಗೆ ಲಕ್​?

ಮಹತ್ವದ ಬೆಳವಣಿಗೆಯಲ್ಲಿ ದಕ್ಷಿಣ ಕನ್ನಡ ಸಂಸದ, ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ಗೆ ಹೈಕಮಾಂಡ್ ಶಾಕ್ ಕೊಟ್ಟಿದೆ ಎನ್ನಲಾಗಿದೆ.

ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಕಾರಣ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್​ಗೆ ಟಿಕೆಟ್​ ನಿರಾಕರಿಸಿದೆ. ಕಟೀಲ್ ಬದಲಿಗೆ ಆರ್​ಎಸ್​ಎಸ್​ ಕಟ್ಟಾಳು ಸತ್ಯಜಿತ್ ಸುರತ್ಕಲ್​ ಹೆಸರನ್ನು ಬಿಜೆಪಿ ಹೈಕಮಾಂಡ್ ಫೈನಲ್ ಮಾಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈಗಾಗಲೇ ಪಕ್ಷೇತರರಾಗಿ ಸ್ಪರ್ಧೆ ಮಾಡುವುದಾಗಿ ಅರುಣ್ ಕುಮಾರ್ ಪುತ್ತಿಲ ಪ್ರಕಟಿಸಿದ್ದಾರೆ.

ಯಾರು ಸತ್ಯಜಿತ್ ಸುರತ್ಕಲ್?

ಸಂಘಪರಿವಾರದ ಸಕ್ರಿಯ ಕಾರ್ಯಕರ್ತರಾದ ಸತ್ಯಜಿತ್ ಸುರತ್ಕಲ್​ ಸಂಘದ ಪರವಾಗಿ ಬಿಜೆಪಿಯಲ್ಲಿ ಕೆಲಸ ಮಾಡುತ್ತಿದ್ದರು. 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೂ ಸತ್ಯಜಿತ್ ಸುರತ್ಕಲ್ ಹೆಸರು ಕೇಳಿಬಂದಿತ್ತು. ಆದರೆ, ಹೈಕಮಾಂಡ್​ ಮತ್ತೆ ನಳಿನ್ ಕುಮಾರ್ ಕಟೀಲ್​ಗೆ ಟಿಕೆಟ್ ನೀಡಿತ್ತು. 2019ರ ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ಡ್ಯಾಮೇಜ್ ಆಗಬಾರದು ಎಂದು ತಕ್ಷಣಕ್ಕೆ ಸತ್ಯಜಿತ್ ಸುರತ್ಕಲ್ ಮೌನಕ್ಕೆ ಜಾರಿದ್ರು. ಚುನಾವಣೆ ನಂತರ ತಮಗೆ ಟಿಕೆಟ್ ತಪ್ಪಿಸಿದವರ ವಿರುದ್ಧ ಬಹಿರಂಗವಾಗಿಯೇ ಹರಿಹಾಯ್ದಿದ್ದರು.

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments