Tuesday, January 27, 2026
24 C
Bengaluru
Google search engine
LIVE
ಮನೆ#Exclusive NewsTop Newsಮದ್ದೂರು ಸಂಘರ್ಷ; ವಿಪಕ್ಷ ನಾಯಕ ಆರ್ ಅಶೋಕ್​ ಗರಂ

ಮದ್ದೂರು ಸಂಘರ್ಷ; ವಿಪಕ್ಷ ನಾಯಕ ಆರ್ ಅಶೋಕ್​ ಗರಂ

ಬೆಂಗಳೂರು: ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭ ನಡೆದ ಕಲ್ಲುತೂರಾಟ ಪ್ರಕರಣದ ಬಗ್ಗೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿ, ಕಳೆದ ಎರಡು ವರ್ಷದಿಂದಲೂ ಇದೇ ರೀತಿಯ ಘಟನೆಗಳು ನಡೆಯುತ್ತಾ ಇವೆ. ಧರ್ಮಸ್ಥಳ ಆಯ್ತು, ಚಾಮುಂಡೇಶ್ವರಿ ಆಯ್ತು, ಈಗ ಮದ್ದೂರಿನಲ್ಲಿ ಅವರ ಗ್ಯಾಂಗ್ ಬಾಲ ಬಿಚ್ಚಿದೆ.ಈ ಘಟನೆಗೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಆರ್ ಅಶೋಕ್ ಕಿಡಿಕಾರಿದ್ದಾರೆ.

ಮದ್ದೂರು ಕಲ್ಲೆಸೆತ ಮತ್ತು ಲಾಠಿಚಾರ್ಜ್ ಹೇಯಕೃತ್ಯ. ಕಲ್ಲೆಸೆತಕ್ಕೆ ಸರ್ಕಾರದ ಕುಮ್ಮಕ್ಕಿದೆ. ಈ ಘಟನೆಗೆ ನೇರ ಕಾರಣ ಪೊಲೀಸ್ ಅವರು ಅಲ್ಲ, ಸರ್ಕಾರದ ಕುಮ್ಮಕ್ಕಿಲ್ಲದೇ ಈ ಘಟನೆಗಳು ನಡೆಯುತ್ತಿರಲಿಲ್ಲ. ನಾವು ಪಾಕಿಸ್ತಾನದಲ್ಲಿವೋ ಕರ್ನಾಟಕದಲ್ಲಿದ್ದೀವೋ ಎಂಬ ಭ್ರಮೆ ಮೂಡುತ್ತಿದೆ. ತಿಮರೋಡಿ ಗ್ಯಾಂಗ್ ಸಿದ್ದರಾಮಯ್ಯನ ಸುತ್ತ ಸುತ್ತಿಕೊಂಡಿದ್ದಾರೆ. ಗಣಪತಿ ವಿಸರ್ಜನೆ ಮಾಡುವುದು ಸಾರ್ವಜನಿಕ ರಸ್ತೆ.

ಇವರ ಅಪ್ಪನ ಆಸ್ತಿನಾ? ನಾವು ಟ್ಯಾಕ್ಸ್ ಕೊಟ್ಟಿರುವುದು. ಇವರ ಯೋಗ್ಯತೆಗೆ ಅಲ್ಲಿ ಒಂದು ಮೀಸಲು ಪಡೆ ಇಟ್ಟಿದ್ದರೆ ಲಾಠಿ ಚಾರ್ಜ್ ಅವಶ್ಯಕತೆ ಇತ್ತಾ? ಹಿಂದೂಗಳ ಮೇಲೆ ಲಾಠಿ ಚಾರ್ಜ್, ದುಷ್ಕರ್ಮಿಗಳಿಗೆ ಯಾಕೆ ಬಡಿದಿಲ್ಲ? ಕಲ್ಲು ಎಸೆದವರಿಗೆ ಯಾಕೆ ಬಡಿದಿಲ್ಲ? ಈ ತರಹ ಗೂಂಡಾಗಳು ಮಸೀದಿಯಲ್ಲಿ ಇರುತ್ತಾರೆ ಅಂತಾ ನಿಮಗೆ ಜ್ಞಾನ ಬೇಡವೇ. ಮದ್ದೂರು ಘಟನೆಗೆ ಸಿಎಂ, ಡಿಸಿಎಂ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments