ಮಧುಗಿರಿ DYSP ರಾಮಚಂದ್ರಪ್ಪಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ..!

ಪೊಲೀಸ್ ಕಚೇರಿಯಲ್ಲಿ ಮಹಿಳೆ ಜೊತೆ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ರಾಮಚಂದ್ರಪ್ಪಗೆ ಒಟ್ಟು 14 ದಿನಗಳ ಕಾಲ ನ್ಯಾಯಾಂಗ ಬಂದನ ವಿಧಿಸಿ ಮಧುಗಿರಿ ಜೆಎಂಎಫ್ಸಿ ಕೋರ್ಟ್ ಶನಿವಾರ ಆದೇಶ ಹೊರಡಿಸಿದೆ. ಸೋಮವಾರದವರೆಗೂ ಮಧುಗಿರಿ ಜೈಲಿನಲ್ಲಿರುವ ಡಿವೈಎಸ್ ಪಿ ರಾಮಚಂದ್ರಪ್ಪ,ಆ ಬಳಿಕ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್ ಮಾಡಲು ಆದೇಶಿಸಲಾಗಿದೆ.
ಅತ್ಯಾಚಾರ ಕೇಸ್ ಅಡಿ ದೂರು ದಾಖಲಿಸಿಕೊಂಡು ರಾಮಚಂದ್ರಪ್ಪರನ್ನ ಬಂಧಿಸಿ ಮಧುಗಿರಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಬಳಿಕ ಮೆಡಿಕಲ್ಗಾಗಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮೆಡಿಕಲ್ ಚೆಕಪ್ ಮಾಡಿಸಿದ್ದಾರೆ. ಇನ್ನೂ ಇದಾದ ಬಳಿಕ ಮಧುಗಿರಿ ಜೆಎಂಎಫ್ಸಿ ಕೋರ್ಟ್ ಜಡ್ಜ್ ಬಳಿ ಹಾಜರುಪಡಿಸಿದ್ದರು. ಇದೀಗ ಮಧುಗಿರಿ ಜೆಎಂಎಫ್ಸಿ ನ್ಯಾಯಾಲಯದಿಂದ 14 ದಿನ ನ್ಯಾಯಾಂಗ ಬಂಧನ ನೀಡಿ ಆದೇಶ ಹೊರಡಿಸಲಾಗಿದೆ.
ಏನಿದು ಪ್ರಕರಣ…?
ಜಮೀನು ವ್ಯಾಜ್ಯದ ವಿಚಾರಕ್ಕೆ ಪಾವಗಡದಿಂದ ದೂರು ನೀಡಲು ಬಂದಿದ್ದ ಮಹಿಳೆಯನ್ನು ಪುಸಲಾಯಿಷಿ ಆಕೆಯೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದು, ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮಧುಗಿರಿಯ ಡಿವೈಎಸ್ಪಿ ರಾಮಚಂದ್ರಪ್ಪನನ್ನು ಅಮಾನತ್ತು ಮಾಡಿ ಡಿಜಿ, ಐಜಿಪಿ ಅಲೋಕ್ ಮೋಹನ್ ಆದೇಶಿಸಿದ್ದರು. ಇದರ ಬೆನ್ನಲ್ಲೇ ಡಿವೈಎಸ್ಪಿ ರಾಮಚಂದ್ರಪ್ಪನನ್ನು ಪೊಲೀಸರು ಬಂಧಿಸಿದ್ದರು.




