Maharashtra

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಆಸ್ಪತ್ರೆಗೆ ದಾಖಲು!

Maharashtra Deputy Chief Minister Eknath Shinde admitted to hospital!

ಮುಂಬೈ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಇಂದು ಮುಂಬೈನ ಥಾಣೆಯಲ್ಲಿರುವ ಜುಪಿಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆಯಿಂದ ಏಕನಾಥ್ ಶಿಂಧೆ ಅವರು ತೀವ್ರ ಜ್ವರ ಮತ್ತು ಮೈಕೈ ನೋವಿನಿಂದ ಬಳಲುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ವೈದ್ಯರ ವಿಶೇಷ ತಂಡವೊಂದು ಏಕನಾಥ್ ಶಿಂಧೆ ಅವರ ಆರೋಗ್ಯದ ಮೇಲೆ ನಿರಂತರ ನಿಗಾ ಇರಿಸಿದ್ದು, ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಲಾಗುತ್ತಿದೆ.

ಕಳೆದ ಕೆಲವು ದಿನಗಳಿಂದ ಬಿಡುವಿಲ್ಲದ ರಾಜಕೀಯ ಕಾರ್ಯಕ್ರಮಗಳು ಮತ್ತು ಅತಿಯಾದ ಕೆಲಸದ ಒತ್ತಡದಿಂದಾಗಿ ಏಕನಾಥ್ ಶಿಂಧೆ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ನಿನ್ನೆ ಮಹಾರಾಷ್ಟ್ರ ವಿಧಾನಸಭೆಯ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲೇ ಅವರಿಗೆ ತೀವ್ರ ಜ್ವರ ಮತ್ತು ಸುಸ್ತು ಕಾಣಿಸಿಕೊಂಡಿತ್ತು ಎನ್ನಲಾಗಿದೆ.

ನಿಗದಿಯಾಗಿದ್ದ ಕಾರ್ಯಕ್ರಮಗಳು ರದ್ದು

ಏಕನಾಥ್ ಶಿಂಧೆ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದರಿಂದ, ಅವರ ಮುಂದಿನ ಎಲ್ಲಾ ಅಧಿಕೃತ ಮತ್ತು ರಾಜಕೀಯ ನಿಗದಿತ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.

Comments (0)

Your email address will not be published. Required fields are marked *

Back to top button