ಮೈಸೂರು: ವನ್ಯಜೀವಿ ಪುನರ್ವಸತಿ ಕೇಂದ್ರದಲ್ಲಿದ್ದ ನಾಲ್ಕು ಹುಲಿಗಳು ಸಾವನ್ನಪ್ಪಿವೆ.. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಗಟ್ಟಿ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು, ಮೃತಪಟ್ಟಿವೆ.. ಕಳೆದ 30 ರಂದು
30 ರಂದು ಹುಣಸೂರು ತಾಲೂಕಿನ ಗೌಡನಕಟ್ಟೆ ಗ್ರಾಮದಲ್ಲಿ ತಾಯಿ ಹುಲಿಯಿಂದ ಬೇರ್ಪಟ್ಟಿದ್ದ 4 ಮರಿಗಳನ್ನು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದು, ಮೈಸೂರು ಕೂರ್ಗಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಚಾಮರಾಜೇಂದ್ರ ಮೃಗಾಲಯ ಪುನರ್ವಸತಿ ಕೇಂದ್ರದಲ್ಲಿದ್ದ ಅದರ ತಾಯಿ ಹುಲಿ ಜತೆಗೆ ಬಿಡಲಾಗಿತ್ತು. ಆದರೆ ಹುಲಿ ಮರಿಗಳು ಪತ್ತೆಯಾಗಿದ್ದವು.
ಸೆರೆ ಹಿಡಿಯುವ ವೇಳೆ ಜನರ ಕಿರುಚಾಟದಿಂದ ಹುಲಿ ಮರಿಗಳು ಗಾಬರಿಯಾಗಿದ್ದವು. ಎರಡು ದಿನ ತಾಯಿಯಿಂದ ದೂರವಾಗಿದ್ದ ಮರಿಗಳು ಆಹಾರವಿಲ್ಲದೇ ಬಳಲಿದ್ದವು. ಜನರ ಕೂಗಾಟದಿಂದ ಅತ್ತಿಂದಿತ್ತ ಓಡಾಡಿ ಸೆರೆ ಹಿಡಿಯುವ ವೇಳೆ ನಿತ್ರಾಣಗೊಂಡಿದ್ದವು.
ತಕ್ಷಣವೇ ಸೂಕ್ತ ಚಿಕಿತ್ಸೆಗಾಗಿ ಪುನರ್ವಸತಿ ಕೇಂದ್ರಕ್ಕೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಗಾಬರಿಗೊಳಗಾಗಿದ್ದ ಮರಿಗಳು ಸರಿಯಾಗಿ ಆಹಾರ ಸೇವಿಸುತ್ತಿರಲಿಲ್ಲ. ಅಸ್ವಸ್ಥಗೊಂಡಿದ್ದ ಹುಲಿ ಮರಿಗಳು ಸಾವನ್ನಪ್ಪಿವೆ. ಪಶುವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ತಾಯಿ ಹುಲಿ ಆರೋಗ್ಯದಿಂದಿದೆ. ಹುಲಿ ಮರಿಗಳ ಅಂಗಾಂಗಗಳನ್ನು ಪರೀಕ್ಷೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.


