ಮಲಯಾಳಂ ನಟ ಮತ್ತು ಮಿಮಿಕ್ರಿ ಕಲಾವಿದ ಕಲಾಭವನ್ ನವಾಸ್ ಸಿನಿಮಾ ಚಿತ್ರೀಕರಣಕ್ಕಾಗಿ ಹೋಟೆಲ್‌ವೊಂದಲ್ಲಿ ತಂಗಿದ್ದು, ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರು ಶಂಕೆ ವ್ಯಕ್ತವಾಗಿದೆ.
ಕಲಾಭವನ್ ನವಾಸ್ ಅವರು ಕೊಚ್ಚಿಯ ಚೊಟ್ಟನಿಕ್ಕಾರಾದಲ್ಲಿರುವ ಹೋಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹೋಟೆಲ್ ರೂಂಗೆ ಸಿಬ್ಬಂದಿ ಭೇಟಿ ನೀಡಿದ ವೇಳೆ ವಿಷಯ ತಿಳಿದು, ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನವಾಸ್ ಅವರ ನಿಧನಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಂತಾಪ ಸೂಚಿಸಿದ್ದಾರೆ.


