Tuesday, November 18, 2025
21.9 C
Bengaluru
Google search engine
LIVE
ಮನೆ#Exclusive NewsTop Newsಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕನ ಬಂಧನ

ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕನ ಬಂಧನ

ಬೆಂಗಳೂರು: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಮಂಜುನಾಥ್​ ಎಂಬ ಕಾಮುಕನನ್ನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ..

ಜಕ್ಕೂರು ಮುಖ್ಯರಸ್ತೆಯಲ್ಲಿ ಅಪಘಾತಕ್ಕೆ ಒಳಗಾಗಿದ್ದ ಶ್ವಾನವನ್ನು ರಕ್ಷಿಸುತ್ತಿದ್ದ ಯುವತಿಯ ಖಾಸಗಿ ಅಂಗವನ್ನು ಮುಟ್ಟಿ ಪರಾರಿಯಾಗಿದ್ದ. ಈ ಸಂಬಂಧ ಅಮೃತಹಳ್ಳಿ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಳು. ಹೀಗಾಗಿ ಆರೋಪಿ ಮಂಜುನಾಥ್​​ ನನ್ನು ಪೊಲೀಸರು ಬಂಧಿಸಿದ್ದಾರೆ..

ಈ ಘಟನೆ ಸೆ.7ರಂದು ರಾತ್ರಿ 11.50ರ ಸುಮಾರಿಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಕ್ಕೂರು ಮುಖ್ಯರಸ್ತೆಯಲ್ಲಿ ಶ್ವಾನ ಒಂದು ಅಪಘಾತಕ್ಕೆ ಒಳಗಾಗಿತ್ತು. ಹೀಗಾಗಿ ಕಾರು ನಿಲ್ಲಿಸಿ ಶ್ವಾನದ ರಕ್ಷಣೆಗೆ ಯುವತಿ ಮುಂದಾಗಿದ್ದಳು. ಈ ವೇಳೆ ಬೈಕ್​ನಲ್ಲಿ ಬಂದಿದ್ದ ಆರೋಪಿ, ಬ್ಯಾಡ್​ ಟಚ್ ಮಾಡಿ ತೆರಳಿದ್ದ. ಸ್ವಲ್ಪ ಹೊತ್ತಿನ ಬಳಿಕ ಮತ್ತೆ ಬಂದು ಯುವತಿಯ ಖಾಸಗಿ ಅಂಗ ಮುಟ್ಟಿ ಪರಾರಿ ಆಗಿದ್ದ. ಈ ಸಂಬಂಧ ಯುವತಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments