ರಾಮನಗರ: ಪ್ರಸಿದ್ಧ ಯಾತ್ರಾ ಸ್ಥಳವಾದ ರೇವಣಸಿದ್ದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ ವೃದ್ಧರೊಬ್ಬರು ಬೆಟ್ಟ ಹತ್ತುವಾಗ ಕಾಲು ಜಾರಿ ಕಂದಕಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ.. ಬಿಡದಿ ಹೋಬಳೀಯ ಕೆಂಪನಹಳ್ಳಿ ನಿವಾಸಿ ರೇವಣ್ಣ (65) ಮೃತ ವ್ಯಕ್ತಿ.
ಇಂದು ಬೆಳಗ್ಗೆ ರೇವಣ್ಣ ಅವರು ತಮ್ಮ ಕುಟುಂಬ ಸಮೇತವಾಗಿ ರೇವಣಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆಯಲು ಬೆಟ್ಟಕ್ಕೆ ಬಂದಿದ್ದರು. ಬೆಟ್ಟ ಹತ್ತುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ..
ವಿಷಯ ತಿಳಿದು ಸ್ಥಳಕ್ಕೆ ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ವೃದ್ಧ ರೇವಣ್ಣ ಅವರ ಮೃತ ದೇಹವನ್ನ ಹೊರತೆಗೆದಿದ್ದಾರೆ.. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದರು. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ.


