#Exclusive NewsTop Newsಜಿಲ್ಲೆಸುದ್ದಿ
ಮಂಡ್ಯ ; ರೋಗಿಗಳನ್ನು ಮಾನವೀಯ ದೃಷ್ಠಿಯಿಂದ ನೋಡಿ ; ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ : ಜಿಲ್ಲೆಯ ಮಿಮ್ಸ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ: ಕುಮಾರ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ರೋಗಿಗಳ ಆರೋಗ್ಯ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಜಿಲ್ಲಾಧಿಕಾರಿಗಳು ಆಸ್ಪತ್ರೆಯ ಶೌಚಾಲಯಗಳು ಹಾಗೂ ನೀರಿನ ವ್ಯವಸ್ಥೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಅಧಿಕಾರಿಗಳಿಗೆ ಇನ್ನೂ ಮುಂದೆ ರೋಗಿಗಳಿಗೆ ಮೂಲಭೂತ ಸೌಕರ್ಯದ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ರೋಗಿಗಳನ್ನು ಮಾನವೀಯ ದೃಷ್ಠಿಯಿಂದ ನೋಡಿ ಮಿಮ್ಸ್ ನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸುಮಾರು 105 ಸ್ವಚ್ಚತಾ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಆಸ್ಪತ್ರೆಯ ಸ್ವಚ್ಛತಾ ಕೆಲಸಗಳನ್ನು ಅವರು ನಿರ್ವಹಿಸುತ್ತಿರುವ ಬಗ್ಗೆ ಅಧಿಕಾರಿಗಳು ಪ್ರತಿದಿನ ಮೇಲ್ವಿಚಾರಣೆ ನಡೆಸದೇ ಇದ್ದಲ್ಲಿ ಕೆಲಸಗಳು ಸುಸೂತ್ರವಾಗಿ ನಡೆಯುವುದಿಲ್ಲ ಹಾಗೂ ಆಸ್ಪತ್ರೆಗೆ ಬರುವ ರೋಗಿಗಗಳು ತಮಗೆ ಸರಿಯಾದ ಸೌಲಭ್ಯ ಸಿಗುತ್ತಿಲ್ಲ ಎಂದು ದೂರು ಸಲ್ಲಿಸುತ್ತಾರೆ ಎಂದರು.




