ಕ್ರೈಂ ಸ್ಟೋರಿಜಿಲ್ಲೆರಾಜಕೀಯರಾಜ್ಯ

ಮಂಗಳೂರು: ಮಾದಕ ವಸ್ತು ಮಾರಾಟ, ಇಬ್ಬರ ಬಂಧನ, ಸ್ವತ್ತು ವಶಕ್ಕೆ

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ಪಡೀಲ್ ಬಳಿ ಸ್ಕೂಟರ್‌ನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಪೊಲೀಸರು ಇಬ್ಬರನ್ನು ಬಂಧನ ಮಾಡಿದ್ದಾರೆ.

ಬಜಾಲ್‌ ಅಶ್ಪಾಕ್ ಯಾನೆ ಜುಟ್ಟು ಅಶ್ಪಾಕ್ (27) ಮತ್ತು ಕಾಟಿಪಳ್ಳದ ಉಮರ್‌ ಫಾರೂಕ್ ಇರ್ಫಾನ್ (26) ಬಂಧಿತರು. ಇವರಿಂದ ಎಂಡಿಎಂಎ ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ಮೊಬೈಲ್ ಫೋನ್ ಸೇರಿದಂತೆ ಒಟ್ಟು ರೂ 1,92 ಲಕ್ಷ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಜುಟ್ಟು ಅಶ್ಫಾಕ್ ಮೇಲೆ ಮಂಗಳೂರು ನಗರದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ, ಕಂಕನಾಡಿ ನಗರ ಪೊಲೀಸ್ ಠಾಣೆ, ಉಳ್ಳಾಲ ಪೊಲೀಸ್ ಠಾಣೆ, ಸುರತ್ಕಲ್ ಪೊಲೀಸ್, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ ,ದರೋಡೆ ಸುಲಿಗೆ ಸೇರಿದಂತೆ ಒಟ್ಟು 12 ಪ್ರಕರಣಗಳು ದಾಖಲಾಗಿರುತ್ತವೆ.

ಆರೋಪಿ ಇರ್ಫಾನ್‌ನ ಮೇಲೆ ಮಂಗಳೂರು ದಕ್ಷಿಣ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆ, ಮೂಡಬಿದ್ರೆ ಪೊಲೀಸ್ ಠಾಣೆ, ಬರ್ಕೆ ಪೊಲೀಸ್ ಠಾಣೆ, ಕೊಣಜೆ ಪೊಲೀಸ್ ಠಾಣೆ, ಸುರತ್ಕಲ್ ಪೊಲೀಸ್ ಠಾಣೆ, ಕಾರ್ಕಳ ನಗರ ಪೊಲೀಸ್ ಠಾಣೆ, ಶಿವ ಪೊಲೀಸ್ ಠಾಣೆ, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ, ಮಂಗಳೂರು ಉತ್ತರ ಪೊಲೀಸ್ ಠಾಣೆ, ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ಆರೋಪಿ ವಿರುದ್ಧ ಕೊಲೆಯತ್ನ, ದರೋಡೆ, ಸುಲಿಗೆ, ಸರಗಳ್ಳತನ, ವಾಹನ ಕಳ್ಳತನದಂತಹ ಒಟ್ಟು 25 ಪ್ರಕರಣಗಳು ದಾಖಲಾಗಿರುತ್ತವೆ ಎಂದು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗ್ರವಾಲ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments (0)

Your email address will not be published. Required fields are marked *

Back to top button