ಮಂಗಳೂರು: ಇಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕೆಯುಡಬ್ಲ್ಯುಜೆ ರಾಜ್ಯ ಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ ಕ್ರಿಕೆಟ್ ಟೂರ್ನಿಯಲ್ಲಿ ಬೆಂಗಳೂರು ನಗರ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಹಾಸನ ತಂಡವು ರನ್ನರ್ ಅಪ್ ಸ್ಥಾನಗಳಿಸಿದೆ.
ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ಕ್ಯಾ. ಪ್ರಾಂಜಲ್ ಸ್ಮರಣಾರ್ಥ ನಡೆದ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಬೆಂಗಳೂರು ನಗರ ಕಾರ್ಯ ನಿರತ ಪತ್ರಕರ್ತರ ಸಂಘವು ಪ್ರಶಸ್ತಿ ಬಾಚಿಕೊಂಡಿದೆ. ಇನ್ನೂ ಹಾಸನ ಕಾರ್ಯನಿರತ ಪತ್ರಕರ್ತರ ತಂಡ ದ್ವಿತೀಯ ಹಾಗೂ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೃತೀಯ ಸ್ಥಾನ ಬಾಚಿಕೊಂಡಿದೆ.
ಸಮಾರೋಪದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಚಿವ ಬೈರತಿ ಬಸವರಾಜು, ಬಿ.ರಮಾನಾಥ ರೈ, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಮೋಹನ್ ಆಳ್ವ ಶುಭ ಹಾರೈಸಿದರು.
ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ, ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ,ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ಮಾತನಾಡಿದರು.
ಕಿಶೋರ್ ಆಳ್ವ, ಸುಚರಿತ ಶೆಟ್ಟಿ, ಇಫ್ತಿಕಾರ್ ಅಲಿ,ಮೂಡಾ ಅಧ್ಯಕ್ಷ ಮನ್ಸೂರ್ ಅಲಿ, ಪೊಲೀಸ್ ಅಧಿಕಾರಿ ಗೋಪಾಲ್ ಕುಂದರ್, ಲೀಲಾಕ್ಷ ಕರ್ಕೇರಾ, ರಾಜ್ಯ ಸಮಿತಿಯ ಪದಾಧಿಕಾರಿಗಳಾದ ಮತ್ತಿಕೆರೆ ಜಯರಾಮ್,ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ, ವಾರ್ತಾಧಿಕಾರಿ ಖಾದರ್ ಶಾ, ಮಹಾರಾಷ್ಟ್ರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್,ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆರ್ ರಾಮಕೃಷ್ಣ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ,ಕೋಶಾಧಿಕಾರಿ ಪದಾಧಿಕಾರಿಗಳಾದ ವಿಜಯ ಕೋಟ್ಯಾನ್, ರಾಜೇಶ್ ದಡ್ಡಂಗಡಿ, ಸಂಘಟಕರಾದ ವಿಲ್ಫೇಡ್ ಡಿ ಸೋಜ, ಆರಿಫ್ ಕೆ, ರಾಜೇಶ್ ಪೂಜಾರಿ, ಪ್ರಧಾನ ಸಂಚಾಲಕ ಅನ್ನು ಮಂಗಳೂರು ಇದ್ದರು. ಪುಷ್ಪ ರಾಜ್ ಬಿ.ಎನ್ ನಿರೂಪಿಸಿದರು.