Top Newsರಾಜ್ಯಸುದ್ದಿ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಕರೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ.ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಂದು ಹುಸಿ ಬಾಂಬ್ ಇ ಮೇಲ್ ಬಂದಿರುವುದು ತಡವಾಗಿ ಬೆಳಕಿಗೆ ಬಂದಿದೆ. ನ.30ರಂದು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನಕ್ಕೆ ಬಾಂಬ್ ಬೆದರಿಕೆ ಇ ಮೇಲ್ ಬಂದಿದೆ. ಈ ಬಗ್ಗೆ ಡಿ.1ರಂದು ಸಿಐಎಸ್ ಎಫ್ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಈ ಬೆದರಿಕೆ ಇ ಮೇಲ್ ಅಕ್ರಮ್ ವೈಕರ್ ಹೆಸರಿನಿಂದ ಓಟ್ ಲುಕ್.ಕಾಮ್ ಎಂಬ ಇಮೇಲ್ ವಿಳಾಸದಿಂದ ಬಂದಿದೆ ಎಂದು ತಿಳಿದು ಬಂದಿದೆ. ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಯು ತೀವ್ರ ತಪಾಸಣೆ ನಡೆಸಿದಾಗ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ದೃಢಪಟ್ಟಿದೆ.ಬೆಳಗ್ಗೆ 10 ಗಂಟೆಗೆ ಅಕ್ರಂ ವೈಕರ್ ಎಂಬ ಹೆಸರಿನ ಐಡಿಯಿಂದ ಇ-ಮೇಲ್ ಬಂದಿದೆ. ಡ್ರಗ್ ಕಿಂಗ್‌ಪಿನ್ ಜಾಫರ್ ಸಾದಿಕ್ ಮತ್ತು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ಪತ್ನಿ ಕೃತಿಗಾ ಉದಯನಿಧಿ ವಿರುದ್ಧದ ಪ್ರಕರಣವನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

ಈಗ ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿ ಬಂಧಿಯಾಗಿರುವ ಟಿಎನ್‌ಎಲ್‌ಎ ಭಯೋತ್ಪಾದಕ ಗುಂಪಿನ ಮುಖ್ಯಸ್ಥ ಎಸ್.ಮಾರನ್ ಅವರನ್ನು ಬಿಡುಗಡೆ ಮಾಡುವಂತೆಯೂ ಇ-ಮೇಲ್ ಒತ್ತಾಯಿಸಿದೆ. ಬೆದರಿಕೆಯ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ  ಅಧಿಕಾರಿಯೊಬ್ಬರು ದೂರು ದಾಖಲಿಸಿದ್ದಾರೆ.

ತಮಿಳುನಾಡು ಡಿಜಿಪಿಯ ಪುತ್ರಿ ದೌದಿ ಜೀವಾಲ್‌ ಅವರನ್ನು ಬಳಸಿಕೊಂಡು ಪಾಕಿಸ್ತಾನದ ಐಎಸ್‌ಐ ನಡೆಸಿದೆ ಎನ್ನಲಾದ 2006ರ ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆಯೂ ಇಮೇಲ್‌ನಲ್ಲಿ ಉಲ್ಲೇಖಗಳಿವೆ. ಅಕ್ಟೋಬರ್ 25 ರಂದು ತಿರುಪತಿಯ ಎರಡು ಪ್ರಸಿದ್ಧ ಹೋಟೆಲ್‌ಗಳಿಗೆ ಬೆದರಿಕೆ ಇಮೇಲ್ ಕಳುಹಿಸಲಾದ ಘಟನೆಯ ಬೆನ್ನಲ್ಲೇ ಮಂಗಳೂರು ವಿಮಾನ ನಿಲ್ದಾಣಕ್ಕೆ ಈ ಬಾಂಬ್ ಬೆದರಿಕೆ ಬಂದಿದೆ.

Comments (0)

Your email address will not be published. Required fields are marked *

Back to top button