Thursday, November 20, 2025
27.5 C
Bengaluru
Google search engine
LIVE
ಮನೆ#Exclusive Newsಭಾರತದ ಆರ್ಥಿಕತೆಯ ಶಿಲ್ಪಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ

ಭಾರತದ ಆರ್ಥಿಕತೆಯ ಶಿಲ್ಪಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಎರಡು ಬಾರಿ ದೇಶದ ಪ್ರಧಾನಿಯಾಗಿ ಹಾಗೂ ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಜವಾಹರಲಾಲ್ ನೆಹರು, ಇಂದಿರಾ ಗಾಂಧಿ ಮತ್ತು ನರೇಂದ್ರ ಮೋದಿ ನಂತರ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ನಾಲ್ಕನೇ ಪ್ರಧಾನಿ ಎನಿಸಿಕೊಂಡಿದ್ದ ಡಾ.ಮನಮೋಹನ್ ಸಿಂಗ್ ಅವರು ಕಳೆದ ಕೆಲ‌ ದಿನಗಳಿಂದ ಬಳಲುತ್ತಿದ್ದರು. ಗುರುವಾರ ರಾತ್ರಿ 9.15ರ ಸುಮಾರಿನಲ್ಲಿ  ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಮನಮೋಹನ್ ಸಿಂಗ್ ಅವರು ಕೊನೆಯುಸಿರೆಳೆದಿದ್ದಾರೆ. ಡಾ.ಸಿಂಗ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ.

ಇನ್ನು, ಡಾ.ಮನಮೋಹನ್ ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. 1991ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ತಮ್ಮ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ್ದ ಸಿಂಗ್, 2024ರ ಏಪ್ರಿಲ್​ನಲ್ಲಿ ಅವರ ರಾಜ್ಯಸಭೆ ಅಧಿಕಾರವಧಿ ಅಂತ್ಯವಾಗಿತ್ತು. ಈ ಮೂಲಕ ಅವರು ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಕಾಲ ಇದ್ದರು.

ದೇಶದ ಆರ್ಥಿಕ ಸುಧಾರಣೆಗಳ ದಿಟ್ಟ ಹೆಜ್ಜೆ ಕೈಗೊಂಡು, ಆಧುನಿಕ ಭಾರತದ ಆರ್ಥಿಕತೆಯ ರೂವಾರಿ ಎನಿಸಿಕೊಂಡಿದ್ದ ಸಿಂಗ್ ಅವರು 1991ರ ಅಕ್ಟೋಬರ್ ನಲ್ಲಿ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಿದ್ದರು. 1991ರಿಂದ 1996ರವರೆಗೆ ನರಸಿಂಹ ರಾವ್ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಮನಮೋಹನ್ ಸಿಂಗ್ ಅವರು ಸೇವೆ ಸಲ್ಲಿಸಿದ್ದಾರೆ. ಬಳಿಕ 2004 ರಿಂದ 2014ರವರೆಗೆ ದೇಶದ ಪ್ರಧಾನ ಮಂತ್ರಿಗಳಾಗಿ ಡಾ.ಸಿಂಗ್ ಸೇವೆ ಸಲ್ಲಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments