#Exclusive NewsTop Newsದೇಶ/ವಿದೇಶರಾಜಕೀಯವಿಶೇಷಸುದ್ದಿ

ನಾಳೆ ದೆಹಲಿಯಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಂತ್ಯಸಂಸ್ಕಾರ

ನವದೆಹಲಿ:  ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಗುರುವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಶನಿವಾರ ದೆಹಲಿಯ ರಾಜ್‌ಘಾಟ್ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಡಾ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಅವರ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ. ಮನಮೋಹನ್ ಸಿಂಗ್ ಅವರ ಪುತ್ರಿ ವಿದೇಶದಿಂದ ಬರಬೇಕಿದ್ದು, ಇಂದು ಮಧ್ಯಾಹ್ನ ಅಥವಾ ಸಂಜೆ ದೆಹಲಿ ತಲುಪಬಹುದು. ಆ ನಂತರವೇ ಎಲ್ಲದರ ಬಗ್ಗೆಯೂ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ತಿಳಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ರಾತ್ರಿ ಡಾ.ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದರು. ಬೆಳಗಾವಿಯಲ್ಲಿ ‘ಗಾಂಧಿ ಭಾರತ’ ಕಾಂಗ್ರೆಸ್ ಅಧಿವೇಶನದಲ್ಲಿದ್ದ ಇಬ್ಬರೂ ನಾಯಕರು ಮನಮೋಹನ್ ಸಿಂಗ್ ನಿಧನದ ಸುದ್ದಿ ತಿಳಿದ ತಕ್ಷಣ ದೆಹಲಿಗೆ ತೆರಳಿದ್ದರು.

ಭಾರತದ ಆರ್ಥಿಕತೆಯ ಶಿಲ್ಪಿ ಎಂದೇ ಕರೆಯಲ್ಪಡುತ್ತಿದ್ದ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ದೇಶದಲ್ಲಿ 7 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗಿದೆ. ಕೇಂದ್ರ ಸರ್ಕಾರ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ ಮತ್ತು 7 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ.

ಅಮೆರಿಕ ಸರ್ಕಾರದಿಂದ ಸಿಂಗ್​ಗೆ ನುಡಿ ನಮನ:

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಅಮೆರಿಕ ಸರ್ಕಾರ ಗೌರವ ಸಲ್ಲಿಸಿದೆ. ಮನಮೋಹನ್ ಸಿಂಗ್ ಅವರು ಆರ್ಥಿಕ ಸುಧಾರಣೆಗಳಿಗಾಗಿ ನೆನಪಿಸಿಕೊಳ್ಳುತ್ತಾರೆ ಎಂದು ಅಮೆರಿಕ ಹೇಳಿದೆ. ಅವರು ಭಾರತದ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸಿದರು. ಅವರು ಅಮೆರಿಕ-ಭಾರತದ ಕಾರ್ಯತಂತ್ರದ ಪಾಲುದಾರಿಕೆಯ ಬೆಂಬಲಿಗರಾಗಿದ್ದರು ಎಂದು ನುಡಿ ನಮನದಲ್ಲಿ ಅಮೆರಿಕ ಸರ್ಕಾರ ಉಲ್ಲೇಖಿಸಿದೆ.

Comments (0)

Your email address will not be published. Required fields are marked *

Back to top button