Top Newsಜಿಲ್ಲೆರಾಜ್ಯ

ಮದುವೆ ಕ್ಯಾನ್ಸಲ್​; ಮನನೊಂದು ಯುವತಿ ಆತ್ಮಹತ್ಯೆಗೆ ಶರಣು

ಮಂಡ್ಯ ಜಿಲ್ಲೆ ಕೆ.ಆರ್​ ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ..

ಕಾವ್ಯಾ (26) ಆತ್ಮಹತ್ಯೆಗೆ ಶರಣಾದ ಯುವತಿ. 15 ದಿನಗಳ ಹಿಂದೆ ಹಾಸನದ ಹುಡುಗನ ಜೊತೆ ಕಾವ್ಯಾ ಮದುವೆ ಫಿಕ್ಸ್ ಆಗಿತ್ತು. ಆದರೆ ಹುಡುಗನ ಮನೆಯವರು ಇತ್ತೀಚೆಗೆ ಮದುವೆ ಬೇಡ ಎಂದು ಮದುವೆ ಕ್ಯಾನ್ಸಲ್ ಮಾಡಿದ್ದರು. ಇದರಿಂದ ಮನನೊಂದ ಯುವತಿ ಕಚೇರಿಯಲ್ಲಿ ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದಾಳೆ. ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಯುವತಿ ಜೀವಬಿಟ್ಟಿದ್ದಾಳೆ. ಕಿಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Comments (0)

Your email address will not be published. Required fields are marked *

Back to top button